ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 | ಈ ದಿನದ ಪ್ರಮುಖ 10 ಸುದ್ದಿಗಳು, 17 ಅಕ್ಟೋಬರ್ 2023

Published 17 ಅಕ್ಟೋಬರ್ 2023, 11:23 IST
Last Updated 17 ಅಕ್ಟೋಬರ್ 2023, 11:23 IST
ಅಕ್ಷರ ಗಾತ್ರ
Introduction

ಸಲಿಂಗ ವಿವಾಹ: ಕಾನೂನಿನ ಮಾನ್ಯತೆ ಇಲ್ಲ ಎಂದ ಸುಪ್ರೀಂ ಕೋರ್ಟ್‌  | ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 9 ಮಂದಿ ಸಾವು | ಐ.ಟಿ ದಾಳಿಯಲ್ಲಿ ಸಿಕ್ಕಿರುವುದು ಬಿಜೆಪಿಯ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್‌ | ಮತ್ತಷ್ಟು ಪ್ರಮುಖ ಸುದ್ದಿಗಳು...

1

ಸಲಿಂಗ ವಿವಾಹ: ಕಾನೂನಿನ ಮಾನ್ಯತೆ ಇಲ್ಲ ಎಂದ ಸುಪ್ರೀಂ ಕೋರ್ಟ್‌ 

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

2

ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 9 ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ವಿರುಧನಗರ ಜಿಲ್ಲೆಯ ಶಿವಕಾಶಿ ಬಳಿಯ ಕಮ್ಮಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

3

ಐ.ಟಿ ದಾಳಿಯಲ್ಲಿ ಸಿಕ್ಕಿರುವುದು ಬಿಜೆಪಿಯ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್‌

ಡಿ.ಕೆ ಶಿವಕುಮಾರ್‌
ಡಿ.ಕೆ ಶಿವಕುಮಾರ್‌

ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪತ್ತೆಯಾಗಿರುವ ಹಣ ಬಿಜೆಪಿಗೆ ಸೇರಿದ್ದು. ಆ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವ ಸಂಬಂಧವೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

4

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ಇರಲಿ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯಪ್ರಜಾವಾಣಿ ಚಿತ್ರ

ಬೆಂಗಳೂರು: ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

5

ಮಾಜಿ ಸಿಎಂ ಬೊಮ್ಮಾಯಿಗೆ ಶಸ್ತ್ರಚಿಕಿತ್ಸೆ

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ​ ಬೊಮ್ಮಾಯಿ ಅವರು ಲಘು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕುರಿತು ಅವರು ಮಾಹಿತಿ ನೀಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

6

ಹಮಾಸ್ ನಾಶವಾಗುವವರೆಗೂ ಇಸ್ರೇಲ್ ಯುದ್ಧ ನಿಲ್ಲಿಸುವುದಿಲ್ಲ: ಬೆಂಜಮಿನ್‌ ನೆತನ್ಯಾಹು

ಬೆಂಜಮಿನ್‌ ನೆತನ್ಯಾಹು
ಬೆಂಜಮಿನ್‌ ನೆತನ್ಯಾಹು

ಜೆರುಸಲೇಂ: ಹಮಾಸ್‌ ಬಂಡುಕೋರರು ನಾಶವಾಗುವವರೆಗೂ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಇಂದು (ಮಂಗಳವಾರ) ಪುನರುಚ್ಚರಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

7

2035ಕ್ಕೆ ಬಾಹ್ಯಾಕಾಶ ನಿಲ್ದಾಣ, 2040– ಚಂದ್ರನ ಅಂಗಳಕ್ಕೆ ಮಾನವ ಗುರಿ: PM ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳೊಂದಿಗೆ ಮಂಗಳವಾರ ಸಭೆ ನಡೆಸಿ, 2035ರ ಹೊತ್ತಿಗೆ ಬಾಹ್ಯಾಕಾಶ ನಿಲ್ದಾಣ ಸಿದ್ಧಪಡಿಸುವುದು ಹಾಗೂ 2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮಾನವನನ್ನು ಕಳುಹಿಸುವ ಗುರಿಯನ್ನು ಹೊಂದುವಂತೆ ಸಲಹೆ ನೀಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

8

’ಇಂಡಿಯಾ’ ದೇಶದ ಶೇ 60ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ: ರಾಹುಲ್ ಗಾಂಧಿ

ಐಜ್ವಾಲ್‌: ‘ಇಂಡಿಯಾ’ ಮೈತ್ರಿಕೂಟವು ದೇಶದ ಶೇ 60ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ. ಇದು ಬಿಜೆಪಿಗಿಂತ ಹೆಚ್ಚು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹೇಳಿದರು.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

9

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಒಬ್ಬ ನಕ್ಸಲ್ ಹತ್ಯೆ, ಎಕೆ–47 ರೈಫಲ್ ವಶ

ಬಿಜಾಪುರ: ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...

10

Sanatana: ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ನನ್ನ ವಿರುದ್ಧ ಅರ್ಜಿ- ಸ್ಟಾಲಿನ್

ಚೆನ್ನೈ: ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ನನ್ನ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ಧೇನೆ ಎಂದು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ನಲ್ಲಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ...