ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 | ಈ ದಿನದ ಪ್ರಮುಖ 10 ಸುದ್ದಿಗಳು, 17 ಸೆಪ್ಟೆಂಬರ್ 2023

Published 17 ಸೆಪ್ಟೆಂಬರ್ 2023, 10:30 IST
Last Updated 17 ಸೆಪ್ಟೆಂಬರ್ 2023, 10:30 IST
ಅಕ್ಷರ ಗಾತ್ರ
Introduction

‘ಪಿ.ಎಂ ವಿಶ್ವಕರ್ಮ’ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ, ಕಲ್ಯಾಣ ಕರ್ನಾಟಕ ಉತ್ಸವ ಸೇರಿದಂತೆ ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು...

1

‘ಪಿ.ಎಂ ವಿಶ್ವಕರ್ಮ’ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ವಿಶ್ವಕರ್ಮ ಜಯಂತಿಯ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಪಿ.ಎಂ ವಿಶ್ವಕರ್ಮ’ ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಯೋಜನೆಯಿಂದ ಸಾಂಪ್ರದಾಯಿಕ ಕೌಶಲ ಕಾರ್ಯಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಹಾಗೂ ಕರಕುಶಲಿಗರಿಗೆ ಸಹಾಯವಾಗಲಿದೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

2

ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ‌ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಇಲ್ಲಿನ ಸಿಎಆರ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

3

ಕಲ್ಯಾಣ ಕರ್ನಾಟಕ ಉತ್ಸವ

ಬೀದರ್‌: ಕಲ್ಯಾಣ ಕರ್ನಾಟಕ ಉತ್ಸವವನ್ನು ನಗರದಲ್ಲಿ ಭಾನುವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಪುಷ್ಪಗೌರವ ಸಲ್ಲಿಸಿದರು. ಅನಂತರ ಪ್ರಮುಖ ಮಾರ್ಗಗಳ ಮೂಲಕ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದ ವರೆಗೆ ಮೆರವಣಿಗೆ ನಡೆಯಿತು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

4

ಹಲವು ಯೋಜನೆಗಳಿಗೆ ಚಾಲನೆ ನೀಡಿದ ಸಿ.ಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ‌ಕರ್ನಾಟಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕೆಕೆಆರ್ ಡಿಬಿಯಿಂದ ಕೈಗೆತ್ತಿಕೊಳ್ಳಲಾದ ₹ 145 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

5

ಬದುಕಿಯೂ ಸತ್ತಂತಿರುವ ಕಾಂಗ್ರೆಸ್ ಸರ್ಕಾರ: ಯಡಿಯೂರಪ್ಪ

ಕೋಲಾರ: 'ರಾಜ್ಯದಲ್ಲಿ ಭೀಕರ ಬರಗಾಲ ಸೇರಿದಂತೆ ಹಲವಾರು ಸಮಸ್ಯೆ ತಲೆದೋರಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಹಿತ ಮರೆತು ಕುಂಭಕರ್ಣ ನಿದ್ದೆಯಲ್ಲಿದೆ. ಬದುಕಿಯೂ ಸತ್ತಂತಿದೆ' ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

6

ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಕೋರಿದ ಖರ್ಗೆ, ರಾಹುಲ್

73ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

7

ಬರಗಾಲ ಹಿನ್ನೆಲೆ | ಹಂಪಿ ಉತ್ಸವ ರದ್ದು: ಶಾಸಕ ಗವಿಯಪ್ಪ ಸುಳಿವು

ಹೊಸಪೇಟೆ (ವಿಜಯನಗರ): ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿಯ ಹಂಪಿ ಉತ್ಸವವನ್ನು ಸಂಪೂರ್ಣ ರದ್ದುಪಡಿಸಿರುವ ಕುರಿತು ಶಾಸಕ ಎಚ್‌.ಆರ್‌.ಗವಿಯಪ್ಪ ಸುಳಿವು ನೀಡಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

8

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಭದ್ರತೆಗೆ 230 ಪೊಲೀಸ್ ಸಿಬ್ಬಂದಿ

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಮೂರು ದಿನ ನಡೆಯಲಿರುವ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

9

Asia Cup Final: ಭಾರತ-ಲಂಕಾ ಪಂದ್ಯಕ್ಕೆ ಮಳೆ ಅಡ್ಡಿ

ಚಿತ್ರ ಕೃಪೆ: ಬಿಸಿಸಿಐ

ಚಿತ್ರ ಕೃಪೆ: ಬಿಸಿಸಿಐ

ಕೊಲಂಬೊ: ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಆದರೆ ಮಳೆಯಿಂದಾಗಿ ಪಂದ್ಯ ಆರಂಭವು ವಿಳಂಬಗೊಂಡಿತು.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...

10

Shooting World Cup: ಚಿನ್ನ ಗೆದ್ದ ಇಳವೆನ್ನಿಲಾ ವಾಳರಿವನ್

ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತದ ಇಳವೆನ್ನಿಲಾ ವಾಳರಿವನ್ ಚಿನ್ನ ಗೆದ್ದಿದ್ದಾರೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ವಾಳರಿವನ್ ಒಟ್ಟು 252.2 ಪಾಯಿಂಟ್ಸ್‌ಗಳೊಂದಿಗೆ ಚಿನ್ನ ಜಯಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ಲಿಸಿ...