ನರೇಂದ್ರ ಮೋದಿ
(ಪಿಟಿಐ ಚಿತ್ರ)
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಮೋದಿ
ಸಂಸತ್ತಿನ ಉಭಯ ಸದನಗಳಲ್ಲೂ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂಸದರನ್ನು ಒತ್ತಾಯಿಸಿದ್ದಾರೆ.
‘ಹೊಸ ರಾಜ್ಯಸಭೆ ಸದನದಲ್ಲಿ ನಾನು ಕೂರುವ ಜಾಗ. ಸಂಸತ್ ಭವನ ವಿಶ್ವದಲ್ಲೇ ಶ್ರೇಷ್ಠ ವಿನ್ಯಾಸ ಎಂದು ಭಾಸವಾಯಿತು..ಇಂಥ ಕೊಡುಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುವೆ’ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಬಣ್ಣಿಸಿದ್ದಾರೆ.
ಇದು ಮಹಿಳಾ ಮೀಸಲಾತಿ ಮಸೂದೆಯಲ್ಲ, 2024ರ ಲೋಕಸಭೆ ಚುನಾವಣೆಗೂ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕಿ ಅತಿಶಿ ಟೀಕಿಸಿದ್ದಾರೆ.
ಹಾಲಶ್ರೀ ಸ್ವಾಮೀಜಿ
ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಆರೋಪಿಯಾಗಿರುವ ಹೊಸಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಮಠದ ಹಾಲವೀರಪ್ಪ ಸ್ವಾಮೀಜಿ ಒಡಿಶಾದಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.
'ಹುಕ್ಕಾ ಬಾರ್ ಗಳ ನಿಷೇಧ ಅಗತ್ಯವಿದೆ ಎಂಬ ತೀರ್ಮಾನಕ್ಕೆ ಬಂದಿದ್ದೇವೆ. ಆದರೆ, ಪ್ರತ್ಯೇಕ ಕಾಯ್ದೆಯ ಬಲವಿಲ್ಲದೆ ನಿಷೇಧಿಸಿದರೆ ನ್ಯಾಯಾಲಯದಲ್ಲಿ ಸರ್ಕಾರಕ್ಕೆ ಹಿನ್ನಡೆ ಆಗುತ್ತದೆ. ಆದ್ದರಿಂದ ಹುಕ್ಕಾ ಬಾರ್ ನಿಷೇಧಿಸುವುದಕ್ಕಾಗಿ ಪ್ರತ್ಯೇಕ ಕಾಯ್ದೆ ರೂಪಿಸಿ, ಜಾರಿಗೊಳಿಸಲು ನಿರ್ಧರಿಸಲಾಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯದಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 'ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆ, ಸಲಹೆಗಳನ್ನು ವಿಲೇವಾರಿ ಮಾಡಿದ ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಲಾಗುವುದು' ಎಂದರು.
ಎಚ್.ಡಿ. ಕುಮಾರಸ್ವಾಮಿ
ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿದೆ. 27 ವರ್ಷಗಳ ನಂತರ ಎಚ್.ಡಿ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ಸಂತಸ ತಂದಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸದೇ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಬೇಕು ಎಂಬ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಸಲಹೆ ಪಾಲಿಸಿದರೆ ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಚಾಮರಾಜನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಹಳೆಯ ಸಂಸತ್ ಭವನದ ಆವರಣದಲ್ಲಿ ನಡೆದ ಗುಂಪು ಫೋಟೊ ಸೆಷನ್‌ನಲ್ಲಿ ಪಾಲ್ಗೊಂಡಿದ್ದ ಉಭಯ ಸದನದ ಸದಸ್ಯರು
–ಪಿಟಿಐ ಚಿತ್ರ
ಹೊಸ ಸಂಸತ್ ಭವನದಲ್ಲಿ ಎರಡನೇ ದಿನದ ಕಲಾಪ ಶುರುವಾಗುವುದಕ್ಕೆ ಕೆಲವೇ ಗಂಟೆಗಳಿಗೂ ಮೊದಲು ಹಳೆಯ ಸಂಸತ್ ಭವನವು ರಂಗುರಂಗಿನ ಉಡುಪು ತೊಟ್ಟಿದ್ದ ಉಭಯ ಸದನಗಳ ಸದಸ್ಯರಿಂದ ತುಂಬಿ ತುಳುಕುತ್ತಿತ್ತು. ವಾಗ್ವಾದ, ಆರೋಪ–ಪ್ರತ್ಯಾರೋಪ ಸೇರಿದಂತೆ ಹಲವು ಘಟನೆಗಳಿಗೆ ಸಾಕ್ಷಿಯಾಗಿದ್ದ ಹಳೆಯ ಭವನಕ್ಕೆ ವಿದಾಯ ಹೇಳುವ ಭಾಗವಾಗಿ ಸಂಸದರು ಗುಂಪು ಫೋಟೊ ಕ್ಲಿಕ್ಕಿಸಿಕೊಂಡರು.