ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 9 ಶನಿವಾರ 2023

Published 9 ಸೆಪ್ಟೆಂಬರ್ 2023, 13:20 IST
Last Updated 9 ಸೆಪ್ಟೆಂಬರ್ 2023, 13:20 IST
ಅಕ್ಷರ ಗಾತ್ರ
Introduction

‘ನವದೆಹಲಿ ಘೋಷಣೆ’ ಕುರಿತು ವಿಶ್ವ ನಾಯಕರಲ್ಲಿ ಒಮ್ಮತ ಮೂಡಿದೆ ಎಂದ ಪ್ರಧಾನಿ ಮೋದಿ, ಕಾವೇರಿ ವಿವಾದ, ಬರ ಘೋಷಣೆ ಕುರಿತು ಕೇಂದ್ರದಿಂದ ಉತ್ತರ ಬಂದಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೂಕಂಪ, 632 ಜನ ಸಾವು ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು

1

‘ನವದೆಹಲಿ ಘೋಷಣೆ’ ಕುರಿತು ವಿಶ್ವ ನಾಯಕರಲ್ಲಿ ಒಮ್ಮತ ಮೂಡಿದೆ ಎಂದ ಪ್ರಧಾನಿ ಮೋದಿ

ಜಿ20 ಶೃಂಗಸಭೆಯಲ್ಲಿ ಅಂಗೀಕರಿಸಲಿರುವ ಉದ್ದೇಶಿತ ‘ನವದೆಹಲಿ ಘೋಷಣೆ’ ಕುರಿತು ವಿಶ್ವ ನಾಯಕರಲ್ಲಿ ಒಮ್ಮತ ಮೂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಿ

2

ಕಾವೇರಿ ವಿವಾದ, ಬರ ಘೋಷಣೆ; ಕೇಂದ್ರದಿಂದ ಉತ್ತರ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಕಾವೇರಿ ವಿವಾದ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸಮಯ ಕೋರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ. ಇದಲ್ಲದೆ ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಇದಕ್ಕೂ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಿ

3

Morocco Earthquake | ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೂಕಂಪ: 632 ಜನ ಸಾವು

ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು 632 ಜನರು ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. 

ಸಂಪೂರ್ಣ ಸುದ್ದಿ ಓದಿ

4

G20 Summit: ನಾಳೆ ದೆಹಲಿಯ ಅಕ್ಷರಧಾಮಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಸೆ.10ರಂದು (ಭಾನುವಾರ) ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಸಂಪೂರ್ಣ ಸುದ್ದಿ ಓದಿ

5

ಆಂಧ್ರಪ್ರದೇಶ ಮಾಜಿ ಸಿ.ಎಂ ಚಂದ್ರಬಾಬು ನಾಯ್ಡು ಬಂಧನ

ಕೌಶಲ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗುದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಿ

6

ಬಿಜೆಪಿ– ಜೆಡಿಎಸ್ ಮೈತ್ರಿ | ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಎಂದ ಎಚ್‌ಡಿಕೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವ ಕುರಿತು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಿ

7

G20 Summit: ಪರಿಸರ ಸ್ನೇಹಿ ಜೈವಿಕ ಇಂಧನ ಮೈತ್ರಿಕೂಟ ರಚನೆಗೆ ಆಹ್ವಾನವಿತ್ತ ಭಾರತ

ಶುದ್ಧ ಹಾಗೂ ಪರಿಸರ ಸ್ನೇಹಿ ಇಂಧನ ಬಳಕೆ ನಿಟ್ಟಿನಲ್ಲಿ ಜೈವಿಕ ಇಂಧನದ ಜಾಗತಿಕ ಮೈತ್ರಿಕೂಟ ರಚನೆಗೆ ಭಾರತ ಜಿ20ರ ಪ್ರಮುಖ ರಾಷ್ಟ್ರಗಳಿಗೆ ಆಹ್ವಾನ ನೀಡಿದೆ.

ಸಂಪೂರ್ಣ ಸುದ್ದಿ ಓದಿ

8

ರಾಜ್ಯದ 62 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯಿದೆ: ಸಿದ್ದರಾಮಯ್ಯ

‘ರಾಜ್ಯದ 62 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಸಂಪುಟ ಸಭೆಯಲ್ಲಿ ಬರಗಾಲ ಘೋಷಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಪೂರ್ಣ ಸುದ್ದಿ ಓದಿ

9

Asia Cup: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಭೀತಿ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಸೂಪರ್ 4ರ ಪಂದ್ಯ ಭಾನುವಾರ ಕೊಲಂಬೊದಲ್ಲಿ ನಡೆಯಲಿದೆ. ಆದರೆ ಪಂದ್ಯಕ್ಕೆ ಮಳೆಯ ಭೀತಿ ಕಾಡುತ್ತಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಒಂದು ವೇಳೆ ಮಳೆ ಅಡ್ಡಿಯಾದರೆ ಮೀಸಲು ದಿನದಂದು (ಸೋಮವಾರ) ಪಂದ್ಯ ಮುಂದುವರಿಯಲಿದೆ.

ಸಂಪೂರ್ಣ ಸುದ್ದಿ ಓದಿ

10

ಶಾರುಕ್ ಖಾನ್ ಬಾಕ್ಸ್ ಆಫೀಸ್ ಬಾದ್‌ಶಾ! ಜವಾನ್ ಬಗ್ಗೆ ರಾಜಮೌಳಿ ಮೆಚ್ಚುಗೆ

ಆಟ್ಲಿ ನಿರ್ದೇಶನದ, ನಟ ಶಾರುಕ್ ಖಾನ್ ಮುಖ್ಯ ಪಾತ್ರದಲ್ಲಿರುವ ಜವಾನ್ ಚಿತ್ರ ಸೆ.7 ರಂದು ಜಗತ್ತಿನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸಿನಿ ಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದ ಬಗ್ಗೆ ವ್ಯಾಪಕ ಮೆಚ್ಚುಗೆಗಳು ಕೇಳಿ ಬರುತ್ತಿವ ಬೆನ್ನಲ್ಲೇ ಖ್ಯಾತ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಅವರು ನಟ ಶಾರುಕ್ ಖಾನ್ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಿ