ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು ಮೇ 21, 2023

Published 21 ಮೇ 2023, 11:44 IST
Last Updated 21 ಮೇ 2023, 11:44 IST
ಅಕ್ಷರ ಗಾತ್ರ
Introduction

ಹಿರೋಷಿಮಾದಲ್ಲಿ ಪ್ರಧಾನಿ ಮೋದಿ– ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತುಕತೆ, ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್, ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ: ಸಿದ್ದರಾಮಯ್ಯ ಸೇರಿದಂತೆ ಈ ದಿನ ಗಮನ ಸೆಳೆದ ಪ್ರಮುಖ 10 ಸುದ್ದಿಗಳು ಇಲ್ಲಿವೆ.

1

ಭಾರಿ ಮಳೆ:   ಬೆಂಗಳೂರಿನ ಅಂಡರ್‌ಪಾಸ್‌ನಲ್ಲಿ ಸಿಲುಕಿದ್ದ ಮಹಿಳೆ ಸಾವು

ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರಿನ ಕೆಆರ್‌ ವೃತ್ತದ ಕೆಳಸೇತುವೆಯಲ್ಲಿ ಮಳೆಯಿಂದ ಸಂಗ್ರಹಗೊಂಡಿದ್ದ ನೀರಿನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ಬಾನು ರೇಖಾ ಎಂಬುವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಆರು ಮಂದಿ ಪಾರಾಗಿದ್ದಾರೆ. ಸೇಂಟ್‌ ಮಾರ್ಥಸ್‌ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮೃತ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದರು.

ಸಂಪೂರ್ಣ ಸುದ್ದಿ ಓದಿ

2

ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ: ಸಿದ್ದರಾಮಯ್ಯ

ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾತನಾಡಿದ ಅವರು, ‘ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಅವರು ಸುಖಾಸುಮ್ಮನೆ ಮಾತನಾಡುತ್ತಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

3

₹2,000 ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: SBI

ಯಾವುದೇ ಮನವಿ ಚೀಟಿ ಇಲ್ಲದೇ ಗ್ರಾಹಕರು ಏಕಕಾಲಕ್ಕೆ ₹20,000ಗಳ ವರೆಗೆ ₹2,000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾನುವಾರ ಸ್ಪಷ್ಟಪಡಿಸಿದೆ. ವಿನಿಮಯದ ಸಮಯದಲ್ಲಿ ಗ್ರಾಹಕರು ಯಾವುದೇ ಗುರುತಿನ ಚೀಟಿಯನ್ನು ಒದಗಿಸುವ ಅಗತ್ಯವೂ ಇಲ್ಲ ಎಂದು ಎಸ್‌ಬಿಐ ತಿಳಿಸಿದೆ.

ಈ ಸುದ್ದಿಯನ್ನು ಪೂರ್ತಿ ಓದಿ

4

370ನೇ ವಿಧಿ ಮರುಸ್ಥಾಪಿಸುವರೆಗೂ ಚುನಾವಣೆಗೆ ಸ್ಪರ್ಧಿಸಲ್ಲ: ಮೆಹಬೂಬ ಮುಫ್ತಿ

ಮೆಹಬೂಬ ಮುಫ್ತಿ
ಮೆಹಬೂಬ ಮುಫ್ತಿ

‘ಸಂವಿಧಾನದ 370ನೇ ವಿಧಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಮರುಸ್ಥಾಪಿಸುವರೆಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಹೇಳಿದರು.

ಈ ಸುದ್ದಿಯನ್ನು ಪೂರ್ತಿ ಓದಿ

5

ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಡಿಸಿಎಂ ತೇಜಸ್ವಿ ಯಾದವ್ ಅವರು ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

6

ರಾಜೀವ್‌ ಗಾಂಧಿ 32ನೇ ಪುಣ್ಯತಿಥಿ: ಸೋನಿಯಾ, ಮಲ್ಲಿಕಾರ್ಜುನ ಖರ್ಗೆ ಸೇರಿ ಗಣ್ಯರ ‌ನಮನ

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮನ ಸಲ್ಲಿಸಿದರು.

ಈ ಸುದ್ದಿಯನ್ನು ಪೂರ್ತಿ ಓದಿ

7

ಹಿರೋಷಿಮಾದಲ್ಲಿ ಪ್ರಧಾನಿ ಮೋದಿ– ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತುಕತೆ

ಹಿರೋಷಿಮಾ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಭಾರತ ಮತ್ತು ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆಗಳ ಪ್ರಗತಿ ಸೇರಿದಂತೆ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸಿದರು

ಈ ಸುದ್ದಿಯನ್ನು ಪೂರ್ತಿ ಓದಿ

8

ಎಲ್ ಸಾಲ್ವಡೋರ್‌ನ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ: 9 ಸಾವು

ಸ್ಯಾನ್ ಸಾಲ್ವಡೋರ್: ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

9

ಬೈಕ್‌ ರ್‍ಯಾಲಿ ಮೇಲೆ ಗುಂಡಿನ ದಾಳಿ: 10 ಮಂದಿ ಸಾವು

ಟಿಜುವಾನಾ(ಮೆಕ್ಸಿಕೊ): ಅಮೆರಿಕ ಗಡಿಯ ಸಮೀಪವಿರುವ ಉತ್ತರ ಮೆಕ್ಸಿಕನ್ ಪಟ್ಟಣವಾದ ಎನ್ಸೆನಾಡಾದಲ್ಲಿ ಬೈಕ್‌ ರ್‍ಯಾಲಿಯನ್ನು ಗುರಿಯಾಗಿಸಿಕೊಂಡು ನಡೆದ ಗುಂಡಿನ ದಾಳಿಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. ಇತರೆ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಪೂರ್ತಿ ಓದಿ

10

ರೋಗಿಗಳಿಗೆ ಐಪಿಎಲ್ ಪಂದ್ಯ ವೀಕ್ಷಣೆ ಅವಕಾಶ

ಬೆಂಗಳೂರು: ಮಣಿಪಾಲ್ ಆಸ್ಪತ್ರೆಗಳ ಸಮೂಹವು ಕ್ಯಾನ್ಸರ್ ರೋಗಿಗಳಿಗೆ ವಿಶೇಷ ಅನುಭವ ಒದಗಿಸಲು ಭಾನುವಾರ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಪೂರ್ತಿ ಓದಿ