ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 28 ಅಕ್ಟೋಬರ್‌ 2023

Published 28 ಅಕ್ಟೋಬರ್ 2023, 12:51 IST
Last Updated 28 ಅಕ್ಟೋಬರ್ 2023, 12:51 IST
ಅಕ್ಷರ ಗಾತ್ರ
Introduction

ರಾಜ್ಯ, ದೇಶ, ವಿದೇಶ ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.

1

ವಿಶ್ವ ಬಂಟರ ಸಮ್ಮೇಳನ: ಬಂಟರ ಅಭಿವೃದ್ಧಿ ನಿಗಮ ಸ್ಥಾಪನೆ– ಸಿದ್ದರಾಮಯ್ಯ

ಸಿದ್ದರಾಮಯ್ಯ
ಸಿದ್ದರಾಮಯ್ಯ

'ಮುಂದಿನ‌ ಬಜೆಟ್ ಮಂಡಿಸುವಾಗ ಬಂಟರ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ಘೋಷಣೆ ಮಾಡುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

2

ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಶೀಘ್ರ: ಮಧು ಬಂಗಾರಪ್ಪ

ಮಧು ಬಂಗಾರಪ್ಪ
ಮಧು ಬಂಗಾರಪ್ಪ

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೀಘ್ರವೇ ಮೊಟ್ಟೆಯ ಜೊತೆಗೆ ಪೌಷ್ಟಿಕಾಂಶವುಳ್ಳ ವಿಶೇಷ ಆಹಾರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

3

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದರೆ ಬಹುಮಾನ ನೀಡುವುದಾಗಿ ಎನ್‌ಐಎ ಪ್ರಕಟಣೆ
ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದರೆ ಬಹುಮಾನ ನೀಡುವುದಾಗಿ ಎನ್‌ಐಎ ಪ್ರಕಟಣೆ
4

ಈರುಳ್ಳಿ: ₹100ರ ಗಡಿ ದಾಟುವ ಸಂಭವ

ಹುಬ್ಬಳ್ಳಿ ಎಪಿಎಂಸಿಯ ಮಾರುಕಟ್ಟೆಯಲ್ಲಿ ಶುಕ್ರವಾರ ಉಳ್ಳಾಗಡ್ಡಿಯನ್ನು ಹರಾಜು ಹಾಕುವಾಗ ಪಾಲ್ಗೊಂಡಿದ್ದ ಚಿಲ್ಲರೆ ವ್ಯಾಪಾರಸ್ಥರು  – ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ ಎಪಿಎಂಸಿಯ ಮಾರುಕಟ್ಟೆಯಲ್ಲಿ ಶುಕ್ರವಾರ ಉಳ್ಳಾಗಡ್ಡಿಯನ್ನು ಹರಾಜು ಹಾಕುವಾಗ ಪಾಲ್ಗೊಂಡಿದ್ದ ಚಿಲ್ಲರೆ ವ್ಯಾಪಾರಸ್ಥರು  – ಪ್ರಜಾವಾಣಿ ಚಿತ್ರ

ರಾಜ್ಯದಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ರೀತಿಯಲ್ಲಿ ಪೂರೈಕೆ ಆಗುತ್ತಿಲ್ಲ. ಹೀಗಾಗಿ ಸಗಟು ಮತ್ತು ಚಿಲ್ಲರೆ ಮಾರಾಟ ದರ ಏರಿಕೆ ಕಾಣುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಸದ್ಯ ಕೆ.ಜಿಗೆ ಗರಿಷ್ಠ ₹70ರಂತೆ ಮಾರಾಟ ಆಗುತ್ತಿದ್ದು, ಪೂರೈಕೆ ಸುಧಾರಿಸದೇ ಇದ್ದರೆ ಕೆ.ಜಿಗೆ ₹100ರ ಗಡಿ ದಾಟುವ ಸಾಧ್ಯತೆ ಇದೆ.

5

ರೋಜ್‌ಗಾರ್ ಮೇಳ: 50 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ

ಪ್ರಧಾನಿ ಮೋದಿ

ಪ್ರಧಾನಿ ಮೋದಿ

–ಚಿತ್ರ ಕೃಪೆ ಪಿಟಿಐ

ರೋಜ್‌ಗಾರ್‌ ಮೇಳದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ವಿಡಿಯೊ ಕಾನ್ಫರೆನ್ಸ್‌ ಮೂಲಕ ಹೊಸದಾಗಿ ಸೇರಿದ 50 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.

6

ಛತ್ತೀಸಗಢ: ಅಧಿಕಾರಕ್ಕೆ ಬಂದರೆ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ: ರಾಹುಲ್ ಗಾಂಧಿ

ರಾಹುಲ್ ಗಾಂಧಿ

ರಾಹುಲ್ ಗಾಂಧಿ

ಪಿಟಿಐ ಚಿತ್ರ

‘ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಹಾಗೂ ಬೀಡಿ ಎಲೆ ಸಂಗ್ರಹಕಾರರಿಗೆ ವಾರ್ಷಿಕ ₹4 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.

7

ಗಾಜಾ: ಭಯೋತ್ಪಾದನೆ ಒಂದು 'ಪಿಡುಗು' ಎನ್ನುತ್ತಾ UN ನಿರ್ಣಯದಿಂದ ಹೊರಗುಳಿದ ಭಾರತ

ವಿಶ್ವಸಂಸ್ಥೆ (ಸಂಗ್ರಹ ಚಿತ್ರ)

ವಿಶ್ವಸಂಸ್ಥೆ (ಸಂಗ್ರಹ ಚಿತ್ರ)

ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಗಾಜಾದಲ್ಲಿ ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕೆಂಬ ವಿಶ್ವಸಂಸ್ಥೆಯ ಮಹಾಸಭೆಯ ನಿರ್ಣಯದಿಂದ ಭಾರತ ಹೊರಗುಳಿದಿದೆ.

8

ಗುಜರಾತ್‌: ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ 

ಗುಜರಾತ್‌ನ ಸೂರತ್‌ ನಗರದ ಅಪಾರ್ಟ್ಮೆಂಟ್‌ನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶನಿವಾರ ಅನುಮಾನ ವ್ಯಕ್ತಪಡಿಸಿದ್ದಾರೆ.

9

ಅಮೆರಿಕ: 18 ಮಂದಿಯನ್ನು ಹತ್ಯೆಗೈದಿದ್ದ ಶೂಟರ್ 2 ದಿನಗಳ ಬಳಿಕ ಶವವಾಗಿ ಪತ್ತೆ

ರಾಬರ್ಟ್‌ ಕಾರ್ಡ್‌

ರಾಬರ್ಟ್‌ ಕಾರ್ಡ್‌

 ಅಮೆರಿಕದ ಮೈನೆ ರಾಜ್ಯದಲ್ಲಿನ ಲೆವಿಸ್ಟನ್‌ ನಗರದ ರೆಸ್ಟೋರೆಂಟ್‌ ಮತ್ತು ‘ಬೌಲಿಂಗ್‌ ಅಲೈ’ ಕೇಂದ್ರದ ಮೇಲೆ ದಾಳಿ ನಡೆಸಿ 18 ಜನರನ್ನು ಹತ್ಯೆಗೈದಿದ್ದ ಬಂದೂಕುಧಾರಿಯೊಬ್ಬ ಸ್ವಯಂ ಪ್ರೇರಿತವಾಗಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

10

AUS vs NZ | 48ನೇ ಓವರ್‌ನಲ್ಲಿ 4 ಸಿಕ್ಸರ್; 49ನೇ ಓವರ್‌ನಲ್ಲಿ 3 ವಿಕೆಟ್

ಆಸ್ಟ್ರೇಲಿಯಾದ ಪ್ಯಾಟ್‌ ಕಮಿನ್ಸ್‌ ಹಾಗೂ ನ್ಯೂಜಿಲೆಂಡ್‌ನ ಟ್ರೆಂಟ್‌ ಬೌಲ್ಟ್‌

ಆಸ್ಟ್ರೇಲಿಯಾದ ಪ್ಯಾಟ್‌ ಕಮಿನ್ಸ್‌ ಹಾಗೂ ನ್ಯೂಜಿಲೆಂಡ್‌ನ ಟ್ರೆಂಟ್‌ ಬೌಲ್ಟ್‌

ಪಿಟಿಐ ಚಿತ್ರಗಳು

ಏಕದಿನ ಕ್ರಿಕೆಟ್‌ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ, ಕೊನೆ ಹಂತದಲ್ಲಿ ನಾಟಕೀಯ ಕುಸಿತ ಕಂಡಿತು.