ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು– ಜೂನ್ 5 ಸೋಮವಾರ 2023

ಈ ದಿನದ ಪ್ರಮುಖ 10 ಸುದ್ದಿಗಳು
Published 5 ಜೂನ್ 2023, 12:54 IST
Last Updated 5 ಜೂನ್ 2023, 12:54 IST
ಅಕ್ಷರ ಗಾತ್ರ
Introduction

ಸಿಬಿಐ ಇರುವುದು ಅಪರಾಧಗಳ ತನಿಖೆಗೆ, ರೈಲು ಅಪಘಾತ ಪತ್ತೆಗಲ್ಲ: ಖರ್ಗೆ, ಮಹಿಳೆಯರ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ, ಜುಲೈ 7ರಂದು ರಾಜ್ಯ ಬಜೆಟ್‌: ಸಿಎಂ ಸಿದ್ದರಾಮಯ್ಯ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.

1

ಸಿಬಿಐ ಇರುವುದು ಅಪರಾಧಗಳ ತನಿಖೆಗೆ, ರೈಲು ಅಪಘಾತ ಪತ್ತೆಗಲ್ಲ: ಖರ್ಗೆ

ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ
ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ

ನವದೆಹಲಿ: ’ಸಿಬಿಐ ಇರುವುದು ಅಪರಾಧಗಳ ಪತ್ತೆ ಕಾರ್ಯಕ್ಕೇ ಹೊರತು ರೈಲ್ವೆ ಅಪಘಾತಗಳ ತನಿಖೆಗಲ್ಲ. ಸರ್ಕಾರದ ಈ ನಡೆಯಿಂದ ತಾಂತ್ರಿಕ, ಸಾಂಸ್ಥಿಕ ಹಾಗೂ ರಾಜಕೀಯ ವೈಫಲ್ಯಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ‘ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇದನ್ನು ಪೂರ್ತಿ ಓದಿ

2

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಬೇಲಿ ಕಳ್ಳತನ: ಫೋಟೊ ಹಂಚಿಕೊಂಡ ಪ್ರತಾಪ ಸಿಂಹ

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ವಿದ್ಯುತ್ ಕಂಬಗಳ ಬ್ರೆಸಿಂಗ್ ಕದ್ದಿರುವ ದೃಶ್ಯ
ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ವಿದ್ಯುತ್ ಕಂಬಗಳ ಬ್ರೆಸಿಂಗ್ ಕದ್ದಿರುವ ದೃಶ್ಯ

ಬೆಂಗಳೂರು: ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಕಂಗೆಡಿಸಿವೆ. ಹೆದ್ದಾರಿಯ ಎರಡೂ ಬದಿಯಲ್ಲಿ ಅಳವಡಿಸಿರುವ ಕಬ್ಬಿಣದ ಬೇಲಿ ಸೇರಿದಂತೆ ಬೆಲೆ ಬಾಳುವ ಪರಿಕರಗಳನ್ನು ಕದ್ದೊಯ್ದ ಪ್ರಕರಣಗಳು ವರದಿಯಾಗಿವೆ.

ಇದನ್ನು ಪೂರ್ತಿ ಓದಿ

3

ಚಕ್ರವರ್ತಿ ಸೂಲಿಬೆಲೆ ಬೆನ್ನಿಗೆ ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ: ಜಗ್ಗೇಶ್

ಜಗ್ಗೇಶ್
ಜಗ್ಗೇಶ್

ಬೆಂಗಳೂರು: ‘ಚಕ್ರವರ್ತಿ ಸೂಲಿಬೆಲೆ ಮತ್ತು ಸಂಘ ಪರಿವಾರದವರು ಕಳೆದ ನಾಲ್ಕು ವರ್ಷ ಹಿಜಾಬ್‌, ಹಲಾಲ್‌, ಆಜಾನ್‌ ಸೇರಿದಂತೆ ಪಠ್ಯಪುಸ್ತಕದಲ್ಲಿ ಮಾಡಿರುವ ಅನಾಹುತವನ್ನು ಸರಿಪಡಿಸುವ ಕೆಲಸ ಕಾಂಗ್ರೆಸ್‌ ಮಾಡಲಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಜಯಪುರದಲ್ಲಿ ಭಾನುವಾರ ಎಚ್ಚರಿಕೆ ನೀಡಿದ್ದರು.

ಇದನ್ನು ಪೂರ್ತಿ ಓದಿ

4

ಮಹಿಳೆಯರ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ.

ಇದನ್ನು ಪೂರ್ತಿ ಓದಿ

5

ರಾಜ್ಯದಲ್ಲಿ ಶೀಘ್ರ ತುರ್ತು ಪರಿಸ್ಥಿತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ‘ಕಾಂಗ್ರೆಸ್ಸಿಗೆ ಎರಡೇ ದಿನದಲ್ಲಿ ಅಧಿಕಾರದ ಅಮಲು ಹೆಚ್ಚಾಗಿದೆ. ಜನರ ವಾಕ್‌ ಸ್ವಾತಂತ್ರ್ಯ ಕಿತ್ತುಕೊಂಡ ರೀತಿಯಲ್ಲಿ ಮಂತ್ರಿಗಳು ಮಾತನಾಡುತ್ತಿದ್ದಾರೆ. ಅತಿ ಶೀಘ್ರದಲ್ಲೇ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ತಲೆದೋರಬಹುದು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನು ಪೂರ್ತಿ ಓದಿ

6

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಅಧಿಕಾರಿಗಳ ಅಮಾನತಿಗೆ ಡಿಕೆಶಿ ಆದೇಶ

ಬೆಂಗಳೂರು: ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಎಂಜಿನಿಯರ್ ಗಳನ್ನು ಸೋಮವಾರ ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.

ಇದನ್ನು ಪೂರ್ತಿ ಓದಿ

7

ಜುಲೈ 7ರಂದು ರಾಜ್ಯ ಬಜೆಟ್‌: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಜುಲೈ 3ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಇದನ್ನು ಪೂರ್ತಿ ಓದಿ

8

ಬ್ರಿಜ್‌ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ: ಅಮಿತ್ ಶಾ ಭೇಟಿಯಾದ ಕುಸ್ತಿ ಪಟುಗಳು

ನವದೆಹಲಿ: ಒಲಿಪಿಂಕ್ ಪದಕ ವಿಜೇತ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೊಗಟ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್‌ಭೂಷಣ್ ವಿರುದ್ಧದ ಪ್ರತಿಭಟನೆ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎನ್‌ಎಸ್ ವರದಿ ಮಾಡಿದೆ.


ಇದನ್ನು ಪೂರ್ತಿ ಓದಿ

9

ಮೋದಿ 'ಭಾರತವೆಂಬ ಕಾರನ್ನು' ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್‌

ರಾಹುಲ್‌ ಗಾಂಧಿ (ಪಿಟಿಐ ಚಿತ್ರ)
ರಾಹುಲ್‌ ಗಾಂಧಿ (ಪಿಟಿಐ ಚಿತ್ರ)

ನ್ಯೂಯಾರ್ಕ್‌ : ‘ಪ್ರಧಾನಿ ನರೇಂದ್ರ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಅಪಘಾತವಾಗಿ ಕಾರು ನಿಂತಾಗ ಅದು ಯಾಕೆ ಮುಂದೆ ಸಾಗುತ್ತಿಲ್ಲ ಎಂದು ಅವರು ಯೋಚಿಸುತ್ತಾರೆ‘ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನು ಪೂರ್ತಿ ಓದಿ

10

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ (ಪಿಟಿಐ): ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮನೀಷ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ಮಧ್ಯಂತರ ಜಾಮೀನು ನಿರಾಕರಿಸಿದೆ. 

ಇದನ್ನು ಪೂರ್ತಿ ಓದಿ