ನವದೆಹಲಿ: ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು.
ಸಚಿವರ ಜತೆಗೆ, ಪಕ್ಷದ ವಿವಿಧ ವಿಭಾಗಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಕೋವಿಡ್–19ರ ಲಸಿಕೆ ಅಭಿಯಾನ, ಸರ್ಕಾರದ ಆಡಳಿತ ಹಾಗೂ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಆಡಳಿತಾರೂಢ ಪಕ್ಷದ ಮುಖಂಡರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಕೆಲ ಸಭೆಗಳಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಲ್ಲದೆ, ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು.