ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಯುಕ್ತ ಕೊಡಮಾಡುತ್ತಿರುವ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಆಯ್ಕೆಯಾಗಿದ್ದಾರೆ.
.ಬೆಂಗಳೂರು ಚಿತ್ರೋತ್ಸವದ ಪ್ರಯುಕ್ತ ಹಂಸಲೇಖ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.
ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಸ್ಥಳೀಯ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು.
.ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು: ಉಣ್ಣಿಕೃಷ್ಣನ್ಗೆ ಜಾಮೀನು .
‘ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ವಿವರಗಳು ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳ್ಳಲಿವೆ’ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ.
.ಭಾರತ–ಅಮೆರಿಕ ವಾಣಿಜ್ಯ ಒಪ್ಪಂದದ ವಿವರಗಳು ಅಂತಿಮ ಹಂತದಲ್ಲಿ: ಎಸ್.ಜೈಶಂಕರ್ .
ಹಣ ವಾಪಸ್ ನೀಡುವಂತೆ ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಮೇಲೆ ಹೂಡಿಕೆದಾರರು ಒತ್ತಡ ಹೇರಿದ್ದರೇ ಎಂಬ ಅನುಮಾನ ವ್ಯಕ್ತವಾಗಿದ್ದು, ಆ ಆಯಾಮದಲ್ಲೂ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
.ರಾಯ್ ಆತ್ಮಹತ್ಯೆ ಪ್ರಕರಣ: ಹಣ ವಾಪಸ್ಗೆ ಹೆಚ್ಚಿತ್ತೇ ಒತ್ತಡ?.
ದೇಶದೆಲ್ಲೆಡೆ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕಾವು ಏರುತ್ತಿದೆ. ಇದೇ ಹೊತ್ತಿನಲ್ಲಿ ಕರ್ನಾಟಕ ಮತ್ತು ಮುಂಬೈ ತಂಡದ ಘಟಾನುಘಟಿ ಆಟಗಾರರು ಶುಕ್ರವಾರದಿಂದ ಆರಂಭವಾಗಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ಫೈನಲ್ನಲ್ಲಿ ಹಣಾಹಣಿ ನಡೆಸಲು ಸಿದ್ಧಗೊಂಡಿವೆ.
.ರಣಜಿ| ಕ್ವಾರ್ಟರ್ಫೈನಲ್: ಕರ್ನಾಟಕ–ಮುಂಬೈ ಕದನ ಕುತೂಹಲ.
‘ಭಾರತ್ ಟ್ಯಾಕ್ಸಿ’ ಸೇವೆಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ ನೀಡಿದ್ದಾರೆ. ಇದು ದೇಶದಲ್ಲಿ ಸಹಕಾರ ತತ್ತ್ವದಲ್ಲಿ ಟ್ಯಾಕ್ಸಿ ಸೇವೆಗಳನ್ನು ಒದಗಿಸುವ ಮೊದಲ ವೇದಿಕೆ ಆಗಿದೆ.
.ಚಾಲಕನೇ ಮಾಲೀಕ । ಮೂರು ವರ್ಷಗಳಲ್ಲಿ ದೇಶದೆಲ್ಲೆಡೆ ಸೇವೆ ಆರಂಭ: ಅಮಿತ್ ಶಾ.
ಎತ್ತಿನಹೊಳೆ ಯೋಜನೆ ಅನುಷ್ಠಾನದ ನಂತರ ನೇತ್ರಾವತಿ ಜಲಾನಯನ ಪ್ರದೇಶದಲ್ಲಿ ಹೆಚ್ಚುವರಿ ನೀರು ಲಭ್ಯವಿಲ್ಲದ ಕಾರಣ ನೇತ್ರಾವತಿ-ಹೇಮಾವತಿ ಜೋಡಣೆ ಕೈಬಿಡಬಹುದು ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಗುರುವಾರ ಹೇಳಿದ್ದಾರೆ.
.ನೇತ್ರಾವತಿ–ಹೇಮಾವತಿ ಜೋಡಣೆ ಕಾರ್ಯಸಾಧುವಲ್ಲ; ಕೇಂದ್ರ .
ಹಾಸನ ಮೆಗಾ ಡೇರಿ ವಿಸ್ತರಣಾ ಯೋಜನೆಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ಮೂಲಕ ₹150 ಕೋಟಿ ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ.
.ಹಾಸನ ಮೆಗಾ ಡೇರಿ ವಿಸ್ತರಣೆಗೆ ₹150 ಕೋಟಿ ನೆರವು: ಕೇಂದ್ರ ಸರ್ಕಾರ ಸಮ್ಮತಿ .
ಕಗ್ಗಲೀಪುರ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಆರೋಪದಡಿ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಪ್ರಾಸಿಕ್ಯೂಷನ್, ಹೈಕೋರ್ಟ್ಗೆ ಆಕ್ಷೇಪಣೆ ಸಲ್ಲಿಸಿದೆ.
.ಶ್ರೀ ಶ್ರೀ ರವಿಶಂಕರ ಗುರೂಜಿ ವಿರುದ್ಧದ FIR: ಹೈಕೋರ್ಟ್ಗೆ ಆಕ್ಷೇಪಣೆ ಸಲ್ಲಿಕೆ.
ಎರಡೂವರೆ ವರ್ಷಗಳಿಂದ ಮಾನಸಿಕವಾಗಿ ನೋವುಂಡಿದ್ದ ನನಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಈಗ ನೆಮ್ಮದಿ ಸಿಕ್ಕಿದೆ. ಇದು ಸತ್ಯಕ್ಕೆ ಲಭಿಸಿದ ಗೆಲುವು. ಇನ್ನುಳಿದ ಅವಧಿಯಲ್ಲಿ ಧೈರ್ಯವಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸುವೆ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.
.ನನ್ನ ಗೆಲುವನ್ನು ಕೋರ್ಟ್ ಎತ್ತಿ ಹಿಡಿದಿದೆ: ಸತ್ಯಕ್ಕೆ ಸಂದ ಜಯ ಎಂದ ನಂಜೇಗೌಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.