ಇರಾನ್ ಯುದ್ಧ, ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಕೊರತೆ ಆತಂಕ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಉಭಯ ದೇಶಗಳ ನಾಯಕರು ನಡೆಸುತ್ತಿರುವ 4ನೇ ಸುತ್ತಿನ ಮಾತುಕತೆ ಇದಾಗಿದೆ. ಹೊರ್ಮುಜ್ ಜಲಸಂಧಿ ಮೂಲಕ ಹಾದು ಹೋಗಲು ಭಾರತೀಯ ಹಡಗುಗಳಿಗೆ ಅವಕಾಶ ನೀಡುವಂತೆ ಭಾರತವು ಇರಾನ್ ಅನ್ನು ಕೇಳುತ್ತಿದೆ. ಎರಡೂ ಬದಿಗಳಲ್ಲಿ ನಿಂತಿರುವ 28 ಹಡಗುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲೂ ಪ್ರಯತ್ನಿಸುತ್ತಿದೆ.
.ಇರಾನ್–ಭಾರತ ಮಾತುಕತೆಯಲ್ಲಿದೆ ಹೊರ್ಮುಜ್ನಲ್ಲಿ ಕಾದಿರುವ 28 ಹಡಗುಗಳ ಪಯಣದ ದಿಕ್ಕು.
ರಾಜ್ಯದ ಐದು ಸಮುದಾಯಗಳಿಗೆ ಸಾಂಸ್ಕೃತಿಕ ಮತ್ತು ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲಾಗುವುದು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಘೋಷಿಸಿದ್ದಾರೆ.
.ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: 5 ಅಭಿವೃದ್ಧಿ ಮಂಡಳಿ ಘೋಷಿಸಿದ ಮಮತಾ.
ಪ್ರಶ್ನೆಗಾಗಿ ಲಂಚ ಪ್ರಕರಣದಲ್ಲಿ ಲೋಕಪಾಲ್ ಕಾಯ್ದೆ ಅಡಿಯಲ್ಲಿ ವಿಚಾರಣೆ ಆರಂಭಿಸಲು ಪ್ರತ್ಯೇಕ ನಿರ್ಬಂಧವನ್ನು ಪರಿಗಣಿಸಲಾಗುವುದಿಲ್ಲ ಎಂಬ ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಲೋಕಪಾಲ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಕುರಿತು ಅಭಿಪ್ರಾಯ ಸಲ್ಲಿಸುವಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಕೋರಿದೆ.
.ಪ್ರಶ್ನೆಗಾಗಿ ಲಂಚ ಪ್ರಕರಣ: ಸಂಸದೆ ಮಹುವಾ ಮೊಯಿತ್ರಾಗೆ ಸುಪ್ರೀಂ ಕೋರ್ಟ್ ನೋಟಿಸ್.
ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ ನೆಲೆಸಿರುವ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಶುಕ್ರವಾರ ರೆಸಾರ್ಟ್ಗೆ ಬಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾ ವೀರಪ್ಪನ್ ಭೇಟಿ ಮಾಡಿದರು.
.ಬಿಡದಿಯ ವಂಡರ್ಲಾ ಬಳಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ವೀರಪ್ಪನ್ ಪುತ್ರಿ.
‘ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಮಾಡಲು ಸಿದ್ಧತೆ ನಡೆಸಿದ್ದಾರೆ. ನೀವಿನ್ನೂ (ರಾಜ್ಯ ಬಿಜೆಪಿ ನಾಯಕರು) ಸಿದ್ದರಾಮಯ್ಯ–ಡಿ.ಕೆ.ಶಿವಕುಮಾರ್ ಸುತ್ತಲೇ ಸುತ್ತುತ್ತಿದ್ದೀರಿ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
.ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಮೋದಿ, ಶಾ ಸಿದ್ಧತೆ: ಪ್ರಿಯಾಂಕ್ ಖರ್ಗೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟರ್ ಹಾಗೂ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೂಲಕ ತಪ್ಪು ಮಾಹಿತಿ ನೀಡುತ್ತಿರುವ ವ್ಯಕ್ತಿ ಮತ್ತು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
.ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ವದಂತಿ ವಿರುದ್ಧದ ಅರ್ಜಿ ವಿಚಾರಣೆಗೆ SC ನಕಾರ.
ಜಿ7 ರಾಷ್ಟ್ರಗಳ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಶರಣಾಗುವ ಹಂತದಲ್ಲಿದೆ ಎಂದು ಹೇಳಿದ್ದಾರೆ.

ಬುಧವಾರ ನಡೆದ ಸಭೆಯಲ್ಲಿ 'ಆಪರೇಷನ್ ಎಪಿಕ್ ಫ್ಯೂರಿ'ಯ ಯಶಸ್ಸನ್ನು ಶ್ಲಾಘಿಸಿದ ಟ್ರಂಪ್, ‘ನಮ್ಮೆಲ್ಲರಿಗೂ ಬೆದರಿಕೆಯಾಗಿದ್ದ ಕ್ಯಾನ್ಸರ್ ಅನ್ನು ನಾನು ತೊಡೆದುಹಾಕಿದ್ದೇನೆ’ ಎಂದು ಸ್ವಪ್ರಶಂಸೆ ಮಾಡಿಕೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
.ಇರಾನ್ ಶರಣಾಗುವ ಹಂತದಲ್ಲಿದೆ: ಜಿ7 ಸಭೆಯಲ್ಲಿ ಡೊನಾಲ್ಡ್ ಟ್ರಂಪ್.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಡಿಶಾದ ಕಾಂಗ್ರೆಸ್ಗೆ ಅಡ್ಡ ಮತದಾನ ಹಾಗೂ ಆಪರೇಷನ್ ಕಮಲ ಭೀತಿ ಎದುರಾಗಿದೆ. ಹೀಗಾಗಿ, ಮೊದಲ ಸಲ ಗೆದ್ದಿರುವ 8 ಶಾಸಕರನ್ನು ಗುರುವಾರ ರಾತ್ರಿ ಕರ್ನಾಟಕಕ್ಕೆ ಕಳಿಸಿದ್ದು, ಅವರ ಹೊಣೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಿದೆ.
.ವಂಡರ್ಲಾ ರೆಸಾರ್ಟ್ನಲ್ಲಿ ಒಡಿಶಾ ಕಾಂಗ್ರೆಸ್ ಶಾಸಕರು: ಡಿಸಿಎಂ ಡಿಕೆಶಿಗೆ ಹೊಣೆ.
ಕಂದಹಾರ್ ವಿಮಾನ ನಿಲ್ದಾಣದ ಸಮೀಪ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ತೈಲ ಸಂಗ್ರಹಣಾ ಘಟಕದ ಮೇಲೆ ಪಾಕಿಸ್ತಾನ ಬಾಂಬ್ ದಾಳಿ ನಡೆಸಿದೆ ಎಂದು ತಾಲಿಬಾನ್ ಸರ್ಕಾರ ಶುಕ್ರವಾರ ತಿಳಿಸಿದೆ.

ಚೀನಾದ ಸಂಧಾನದ ಪ್ರಯತ್ನಗಳ ನಡುವೆಯೂ ಉಭಯ ದೇಶಗಳ ನಡುವಿನ ಸಂಘರ್ಷ ತೀವ್ರ ಮಟ್ಟಕ್ಕೆ ತಲುಪಿದೆ.
.ಆಫ್ಗನ್ ತೈಲ ಸಂಗ್ರಹಣಾ ಘಟಕದ ಮೇಲೆ ಪಾಕ್ ದಾಳಿ: ಚೀನಾ ಸಂಧಾನಕ್ಕೆ ಹಿನ್ನಡೆ.
ನನ್ನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ವರುಣ ಹೋಬಳಿಯ ವರಕೋಡು ಗ್ರಾಮದಲ್ಲಿ ಶುಕ್ರವಾರ ಬೀರೇಶ್ವರ ದೇವರ ದೇವಸ್ಥಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
.ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿರುವೆ: ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.