ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಮೈಸೂರು: ‘ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಇನ್ನೂ ಮಾಡಿಲ್ಲ. ತೃತೀಯ ಭಾಷೆ ಹಿಂದಿಯನ್ನು ಕಡ್ಡಾಯ ಮಾಡಬಾರದು ಎಂದು ಹೇಳಿದ್ದೇವೆ. ಇದು ಈ ವರ್ಷದಿಂದಲೇ ಜಾರಿಯಾಗಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ದ್ವಿಭಾಷಾ ನೀತಿಯ ಭಾಗವಾಗಿಯೇ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಯ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸದಿರಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧೆಡೆ ಶನಿವಾರ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಕರಾವಳಿಯಲ್ಲಿ ಎರಡು ವಾರಗಳಿಂದ ಈಚೆಗೆ ಉಷ್ಣಾಂಶ ಹೆಚ್ಚಳವಾಗಿತ್ತು. ಜನರು ಸೆಖೆಯಿಂದ ಬಸವಳಿದಿದ್ದರು. ಕೆಲವೆಡೆ ಮಳೆ ಜೊತೆ ಆಲಿಕಲ್ಲುಗಳು ಬಿದ್ದಿವೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಯೋಲ್: ಮೇಲ್ದರ್ಜೆಗೇರಿಸಲಾದ ಘನ-ಇಂಧನ ರಾಕೆಟ್ ಎಂಜಿನ್ ಅನ್ನು ಉತ್ತರ ಕೊರಿಯಾ ಶನಿವಾರ ಪರೀಕ್ಷೆ ಮಾಡಿದ್ದು, ಸರ್ವಾಧಿಕಾರಿ ಕಿಮ್ ಉನ್ ಜಾನ್ ಉಪಸ್ಥಿತರಿದ್ದರು ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ‘ಆರೋಗ್ಯ ಸೇವೆಯಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ. ನಮ್ಮ ಸರ್ಕಾರವು ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆ ಆರಂಭಿಸಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನೊಯ್ಡಾ (ಉತ್ತರ ಪ್ರದೇಶ): ‘ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಹಲವು ಸವಾಲುಗಳನ್ನು ಒಡ್ಡುತ್ತಿದ್ದು, ಭಾರತ ಇವುಗಳನ್ನು ತನ್ನೆಲ್ಲ ಶಕ್ತಿಯೊಂದಿಗೆ ಸಮರ್ಥವಾಗಿ ಎದುರಿಸುತ್ತಿದೆ. ದೇಶದ ಜನರ ಹಿತಾಸಕ್ತಿ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ರಾಜ್ಯದ ರಾಜಧಾನಿಯಾಗಿ ಅಮರಾವತಿ ನಗರಕ್ಕೆ ಕಾನೂನುಬದ್ಧ ಮಾನ್ಯತೆ ನೀಡುವುದಕ್ಕೆ ಆಂಧ್ರಪ್ರದೇಶ ಪುನರ್ರಚನೆ ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಶನಿವಾರ ಅಂಗೀಕರಿಸಲಾಯಿತು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ದೇಶದಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರ ಒಟ್ಟಾರೆ ನಿರುದ್ಯೋಗ ಪ್ರಮಾಣವು 2025ರಲ್ಲಿ ಶೇಕಡ 3.1ಕ್ಕೆ ಇಳಿದಿದೆ. ಇದು 2024ರಲ್ಲಿ ಶೇ 3.2ರಷ್ಟಿತ್ತು ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಸಮೀಕ್ಷೆ ತಿಳಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಶನಿವಾರ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಅಮೆರಿಕದಾದ್ಯಂತ ಪ್ರತಿಭಟನಾಕಾರರು ರ್ಯಾಲಿ ನಡೆಸಿ ಟ್ರಂಪ್ ಅವರ ಸರ್ವಾಧಿಕಾರಿ ಧೋರಣೆಯ ಆಡಳಿತ ಶೈಲಿ, ವಲಸೆ ನೀತಿ ಹಾಗೂ ಇರಾನ್ ವಿರುದ್ಧದ ಯುದ್ಧದ ಕುರಿತು ತಮ್ಮ ಆಕ್ರೋಶಗಳನ್ನು ವ್ಯಕ್ತಪಡಿಸಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಭಾರಂಭ ಮಾಡಿಕೊಂಡಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.