ಟೊಮೆಟೊ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು; ₹15 ಲಕ್ಷಕ್ಕೂ ಹೆಚ್ಚು ನಷ್ಟ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸು ಹಾಳು: ಅಖಿಲೇಶ್ ಯಾದವ್, ಓಣಂ ಹಬ್ಬಕ್ಕೆ ಪ್ರಯಾಣಿಸುವವರಿಗೆ ಕೊಚುವೇಲಿ–ಬೆಂಗಳೂರು ನಡುವೆ ವಿಶೇಷ ರೈಲು ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬುಧವಾರ ಮತ್ತೊಂದು ಚೀತಾ ಮೃತಪಟ್ಟಿರುವ ಬೆನ್ನಲ್ಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸು ಹಾಳಾಗುತ್ತಿದೆ’ ಎಂದು ಹೇಳಿದ್ದಾರೆ.
‘ತಮಿಳುನಾಡಿನ ಸಚಿವ ವಿ. ಸೆಂಥಿಲ್ ಬಾಲಾಜಿ ಹಾಗೂ ಇತರರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಮತ್ತೊಮ್ಮೆ ಶೋಧ ನಡೆಸಿದೆ’ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸಲು ಹಾಗೂ ಓಣಂ ಹಬ್ಬದ ಪ್ರಯುಕ್ತ ಕೊಚುವೇಲಿ ಹಾಗೂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ (06083/ 06084) ರೈಲುಗಳ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದೆ.
ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಸೇವಾವಧಿಯನ್ನು ಮತ್ತೆ ಒಂದು ವರ್ಷ ವಿಸ್ತರಿಸಿದ್ದು, ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರವು ಗುರುವಾರ ನಿಯಮಗಳನ್ನು ಸಡಿಲಿಸಿದೆ.
‘ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆಯರನ್ನು ರಕ್ಷಿಸುವ ಸರ್ಕಾರದ ಯಾವುದಾದರೂ ಇಲಾಖೆ ಇದೆಯೇ?’ ಎಂದು ಎಎಪಿಯ ಮಾಧ್ಯಮ ವಕ್ತಾರ ನವಾಬ್ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಪ್ರಶ್ನಿಸಿದ್ದಾರೆ.
ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಮಂಜು ಎಂಬ ರೈತರು ಬೆಳೆದಿದ್ದ ಟೊಮೆಟೊ ಬೆಳೆಯನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ ನಾಶ ಮಾಡಿದ್ದಾರೆ.
ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾರತದಲ್ಲಿ ಶಿಕ್ಷಣ ಪಡೆಯುವ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ಸರಳಗೊಳಿಸಲು ಮತ್ತು ಒಂದೇ ವೇದಿಕೆಯಡಿ ಎಲ್ಲ ಮಾಹಿತಿ ಒದಗಿಸುವ ಸ್ಟಡಿ ಇನ್ ಇಂಡಿಯಾ (ಎಸ್‌ಐಐ) ಪೋರ್ಟಲ್ ಅನ್ನು ಕೇಂದ್ರ ಸರ್ಕಾರ ಆರಂಭಿಸಿದೆ.
ಹಿಂಸಾಚಾರ ಪೀಡಿತ ಮಣಿಪುರ ವಿಚಾರವಾಗಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ ಮಧ್ಯೆಯೇ, ಕಡಲ ತೀರದಲ್ಲಿನ ಖನಿಜಗಳ ಅನ್ವೇಷಣೆ, ಗಣಿಗಾರಿಕೆಗೆ 50 ವರ್ಷಗಳ ಕಾಲ ಗುತ್ತಿಗೆ ನೀಡುವುದಕ್ಕೆ ಅವಕಾಶ ಕಲ್ಪಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.
ಬೆಂಗಳೂರು: ಪ್ರಿಯತಮನನ್ನು ಭೇಟಿ ಮಾಡಲು ನೇಪಾಳದ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಭಾರಿ ಸುದ್ದಿ ಮಾಡಿದ್ದರು. ಆನ್‌ಲೈನ್ ಮೊಬೈಲ್ ಗೇಮ್ ಪಬ್‌ಜಿಯಲ್ಲಿ ಸಂಪರ್ಕಕ್ಕೆ ಸಿಕ್ಕಿದ್ದ ನೋಯ್ಡಾ ಸಚಿನ್ ಮೀನಾ ಜೊತೆ ಪ್ರೇಮಾಂಕುರವಾಗಿ 4 ಮಕ್ಕಳ ಜೊತೆ ಭಾರತಕ್ಕೆ ಬಂದಿದ್ದರು.