ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

TOP 10 | ಈ ದಿನದ ಪ್ರಮುಖ 10 ಸುದ್ದಿಗಳು: ಬುಧವಾರ, 17 ಮೇ, 2023

Published 17 ಮೇ 2023, 11:45 IST
Last Updated 17 ಮೇ 2023, 13:21 IST
ಅಕ್ಷರ ಗಾತ್ರ
Introduction

ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನು ಅಂತಿಮವಾಗಿಲ್ಲ: ರಣದೀಪ್ ಸಿಂಗ್ ಸುರ್ಜೇವಾಲಾ|ಸಮ್ಮಿಶ್ರ ಸರ್ಕಾರದಿಂದ ಹೊರಬಂದಿದ್ದಕ್ಕೆ ಸಿದ್ದರಾಮಯ್ಯನವರೇ ಪ್ರೇರಣೆ: ಸುಧಾಕರ್| ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

1

ಸಿಎಂ ಆಯ್ಕೆ ಅಂತಿಮವಾಗಿಲ್ಲ, ಖರ್ಗೆ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ: ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಎಂಬುದು ಇನ್ನು ಅಂತಿಮವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಂ ಆಯ್ಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಹೊಸ ಸಿಎಂ ಆಯ್ಕೆ ಮಾಡುವುದರ ಜತೆ ಹೊಸ ಸಚಿವ ಸಂಪುಟ ರಚನೆಯಾಗಲಿದೆ’ ಎಂದು ತಿಳಿಸಿದರು.


ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

2

ನಮ್ಮ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇಲ್ಲವೆಂದು ಅವರು ನಿರಾಕರಿಸುವರೇ? ಸುಧಾಕರ್ 

ಬೆಂಗಳೂರು: 2018ರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಾವು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಬಿಜೆಪಿಯ ಮಾಜಿ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

3

ಸಿದ್ದರಾಮಯ್ಯ ಅಸಹಾಯಕತೆ ನಾವು ಪಕ್ಷ ಬಿಡಲು ಪ್ರೇರಣೆ: ಮಾಜಿ ಸಚಿವ ಎಸ್‌.ಟಿ ಸೋಮಶೇಖರ್‌

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನದ ನಮ್ಮ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇಲ್ಲವೆಂದು ಅವರು ನಿರಾಕರಿಸುವರೇ? ಎಂದು ಮಾಜಿ ಸಚಿವ ಸುಧಾಕರ್ ಹೇಳಿಕೆಯನ್ನು ಮಾಜಿ ಸಚಿವ ಎಸ್‌.ಟಿ ಸೋಮಶೇಖರ್‌ ಸಮರ್ಥಿಸಿಕೊಂಡಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

4

ಟ್ರೋಲ್‌ಗೆ ಒಳಗಾದವರ ಜೀವನದಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿಯಲ್ಲ: ಕೆ‌ಎಲ್ ರಾಹುಲ್

ಸಾಮಾಜಿಕ ಮಾಧ್ಯಮಗಳಲ್ಲಿನ ಟ್ರೋಲ್‌ಗಳು ಒಬ್ಬ ಆಟಗಾರನ ಮಾನಸಿಕ ಪರಿಸ್ಥಿತಿಯ ಮೇಲೆ ಯಾವ ರೀತಿ ನಕಾರಾತ್ಮಕ ಪರಿಣಾಮ ಬೀರುತ್ತದೆ ಎನ್ನುವ ಕುರಿತು ಇದೇ ಮೊದಲ ಬಾರಿಗೆ ಕ್ರಿಕೆಟಿಗ, ಕನ್ನಡಿಗ ಕೆ.ಎಲ್‌ ರಾಹುಲ್‌ ಮನಬಿಚ್ಚಿ ಮಾತನಾಡಿದ್ದಾರೆ. ಜನಪ್ರಿಯ ಟಾಕ್‌ ಶೋವೊಂದರಲ್ಲಿ ಭಾಗವಹಿಸಿದ್ದ ಕೆ.ಎಲ್‌. ರಾಹುಲ್ ತಮ್ಮ ಕ್ರಿಕೆಟ್‌ ಜೀವನದ ಏಳು–ಬೀಳು, ಟ್ರೋಲ್‌ನಿಂದಾದ ಖಿನ್ನತೆ ಬಗ್ಗೆ ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಟ್ರೋಲ್‌ಗಳು ಒಬ್ಬ ಕ್ರೀಡಾಪಟುವಿನ ಜೀವನದಲ್ಲಿ ಹೇಗೆ ಪರಿಣಾಮ ಬೀರುತ್ತದೆ ಎಂಬುವುದರ ಬಗ್ಗೆ ರಾಹುಲ್ ವಿವರವಾಗಿ ತಿಳಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

5

ಚಾಮರಾಜನಗರ ಕ್ಷೇತ್ರ: ಲಿಂಗಾಯತ ಮುಖಂಡರ ವಿರುದ್ಧವೇ ಹರಿಹಾಯ್ದ ವಿ.ಸೋಮಣ್ಣ

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ವಿ.ಸೋಮಣ್ಣ ಅವರು ಬುಧವಾರ ಕೃತಜ್ಞತಾ ಸಭೆಯಲ್ಲಿ ಪಕ್ಷದ ಲಿಂಗಾಯತ ಮುಖಂಡರ ವಿರುದ್ಧವೇ ಅಸಮಾಧಾನ ಹೊರಹಾಕಿದರು. 'ನಾನು ನಂಬಿದವರೇ ಕತ್ತು ಕೊಯ್ದರು' ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಭೆ ಆರಂಭವಾಗುತ್ತಲೇ ಕೆಲವು ಕಾರ್ಯಕರ್ತರು ಒಳೇಟಿನಿಂದಾಗಿ ಸೋಲಾಗಿದೆ ಎಂದು ಗದ್ದಲ ಎಬ್ಬಿಸಿದರು.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

6

6 ರಾಜ್ಯಗಳು ಸೇರಿದಂತೆ 100 ಸ್ಥಳಗಳಲ್ಲಿ ಎನ್‌ಐಎ ಶೋಧ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 6 ರಾಜ್ಯಗಳು ಸೇರಿದಂತೆ ನೂರು ಸ್ಥಳಗಳಲ್ಲಿ ಬುಧವಾರ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸುತ್ತಿದೆ. ಹರಿಯಾಣ, ಪಂಜಾಬ್‌, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ವಿವಿಧೆಡೆ ಶೋಧ ಕಾರ್ಯ ನಡೆಯುತ್ತಿದೆ. ಗ್ಯಾಂಗ್‌ಸ್ಟರ್‌ಗಳು, ಮಾದಕ ವಸ್ತು ಸಾಗಣೆಯಲ್ಲಿ ತೊಡಗಿರುವವರು, ಉಗ್ರ ಚಟುವಟಿಕೆಗಳಲ್ಲಿ ತೊಡಿಸಿಕೊಂಡವರು ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರ ಮೇಲೆ ದಾಳಿ ಮಾಡಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

7

ಲೈಂಗಿಕ ಕಿರುಕುಳ ಆರೋಪ; ಬಿ.ವಿ. ಶ್ರೀನಿವಾಸ್‌ಗೆ ಮಧ್ಯಂತರ ರಕ್ಷಣೆ ಒದಗಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅಸ್ಸಾಂನ ಯುವ ಕಾಂಗ್ರೆಸ್‌ನ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಅಂಕಿತಾ ದತ್ತಾ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಭದ್ರಾವತಿಯ ಬಿ.ವಿ. ಶ್ರೀನಿವಾಸ್‌ ಅವರಿಗೆ ಸುಪ್ರೀಂ ಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ಒದಗಿಸಿದೆ. ನಿರೀಕ್ಷಣಾ ಜಾಮೀನು ತಿರಸ್ಕರಿಸಿದ್ದ ಗುವಾಹಟಿ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಶ್ರೀನಿವಾಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಂಕಿತಾ ದತ್ತಾ ದಾಖಲಿಸಿದ್ದ ಪ್ರಕರಣದಲ್ಲಿ ಶ್ರೀನಿವಾಸ್ ಅವರಿಗೆ ಮೇ 5ರಂದು ಗುವಾಹಟಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

8

ಸಿದ್ದರಾಮಯ್ಯ ಬೆಂಬಲಿಗರಿಂದ ಜೈಕಾರ, ಭಾವಚಿತ್ರಕ್ಕೆ ಪೂಜೆ

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಯಾರು? ಎಂದು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸುವ ಮೊದಲೇ ಶಿವಾನಂದ ವೃತ್ತದಲ್ಲಿರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಮುಂಭಾಗದಲ್ಲಿ ಅವರ ಬೆಂಬಲಿಗರು, ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತಿದ್ದಾರೆ. ಪೂಜೆ ಮಾಡಿ, ತೆಂಗಿನ ಕಾಯಿ ಒಡೆದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

9

ಮಹಾರಾಷ್ಟ್ರದಲ್ಲಿ ಗಲಭೆಗಳ ಪ್ರಯೋಗಾಲಯ ಸೃಷ್ಟಿಗೆ ಬಿಜೆಪಿ ಯತ್ನ: ಶಿವಸೇನಾ ಉದ್ಧವ್ ಬಣ

ಮುಂಬೈ: ಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ಧ್ರುವೀಕರಣಕ್ಕಾಗಿ ಗಲಭೆಗಳ ಪ್ರಯೋಗಾಲಯ ಸೃಷ್ಟಿಸಲು ಬಿಜೆಪಿ ಹಾಗೂ ಬೆಂಬಲಿಗರು ಯತ್ನಿಸುತ್ತಿದೆ ಎಂದು ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ಆರೋಪಿಸಿದೆ. ಪಕ್ಷದ ಮುಖವಾಣಿ 'ಸಾಮ್ನಾ'ದಲ್ಲಿ ಈ ಕುರಿತು ಉಲ್ಲೇಖ ಮಾಡಲಾಗಿದ್ದು, ಸರ್ಕಾರ ರಚಿಸಲು ಶಿವಸೇನಾ ಪಕ್ಷವನ್ನು ಒಡೆದಂತೆಯೇ ಸಮಾಜವನ್ನು ವಿಭಜಿಸುವ ಮೂಲಕ ಚುನಾವಣೆ ಎದುರಿಸಲು ಬಿಜೆಪಿ ಬಯಸುತ್ತಿದೆ ಎಂದು ಆರೋಪಿಸಿದೆ.

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ

10

ಚಿನ್ನದ ದರ ₹500, ಬೆಳ್ಳಿ ₹450ರಷ್ಟು ಇಳಿಕೆ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರವು 10 ಗ್ರಾಂಗೆ ₹500ರಷ್ಟು ಇಳಿಕೆ ಕಂಡು ₹60,580ರಂತೆ ಮಾರಾಟವಾಯಿತು. ‌

ಸಂಪೂರ್ಣ ಸುದ್ದಿ ಓದಲು ಲಿಂಕ್ ಕ್ಲಿಕ್ ಮಾಡಿ