ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ...

ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್, ಬುಧವಾರ ತಮಿಳುನಾಡಿನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲದ ಕೊರತೆಯಿಂದಾಗಿ ಮುಖ್ಯಮಂತ್ರಿಯಾಗಿ ನಾಳೆ (ಮೇ 7) ಪ್ರಮಾಣವಚನ ಸ್ವೀಕರಿಸುವುದು ಅನುಮಾನವೆನಿಸಿದೆ.
.ವಿಜಯ್ಗೆ 'ಮ್ಯಾಜಿಕ್ ಸಂಖ್ಯೆ'ಯ ಕೊರತೆ, ಗವರ್ನರ್ಗೆ ಮನದಟ್ಟು ಮಾಡುವಲ್ಲಿ ವಿಫಲ?.
ಚೆನ್ನೈ: ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ಬೆಂಬಲ ಸೂಚಿಸುವ ವಿಚಾರವಾಗಿ ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ವಿಜಯ್ ಅವರು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸರ್ಕಾರ ರಚನೆಗೆ ಇನ್ನೂ 10 ಸ್ಥಾನಗಳ ಅಗತ್ಯವಿದ್ದು, ಕಾಂಗ್ರೆಸ್, ಎಡಪಕ್ಷಗಳ ಬೆಂಬಲವನ್ನು ವಿಜಯ್ ಕೋರಿದ್ದಾರೆ.
.ಟಿವಿಕೆಗೆ ಬೆಂಬಲ ನೀಡುವಂತೆ ಶಾಸಕರ ದುಂಬಾಲು: ಎಐಎಡಿಎಂಕೆಯಲ್ಲಿ ಗೊಂದಲ.
ಚೆನ್ನೈ: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು(ಬುಧವಾರ) ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.
.ತಮಿಳುನಾಡು: ದೀರ್ಘಕಾಲದ ಡಿಎಂಕೆ ಮೈತ್ರಿ ಬಿಟ್ಟು ಟಿವಿಕೆ ಕೈಹಿಡಿದ ಕಾಂಗ್ರೆಸ್.
ಬೆಂಗಳೂರು: ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್.ಜೀವರಾಜ್ ಅವರು ಶಾಸಕರಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಮಾಣವಚನ ಬೋಧಿಸಿದರು.
.ಶೃಂಗೇರಿ ಶಾಸಕರಾಗಿ ಡಿ.ಎನ್. ಜೀವರಾಜ್ ಪ್ರಮಾಣ.
ಪಾಲಕ್ಕಾಡ್: ಈ ಬಾರಿಯ ಕೇರಳ ವಿಧಾನಸಭೆ ಚುನಾವಣೆ ಹಲವಾರು ಕಾರಣಗಳಿಗಾಗಿ ಗಮನ ಸೆಳೆದಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಒಂದೇ ಮನೆಯ ಇಬ್ಬರು ಜನಪ್ರತಿನಿಧಿಗಳು ಒಂದೇ ಪ್ರದೇಶವನ್ನು ಪ್ರತಿನಿಧಿಸುತ್ತಿರುವ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ.
.ಒಂದೇ ಮನೆಯಿಂದ ಇಬ್ಬರು ಜನಪ್ರತಿನಿಧಿಗಳು: ಪತಿ ಸಂಸತ್ತಿಗೆ, ಪತ್ನಿ ವಿಧಾನಸಭೆಗೆ.
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆ ಅಧಿಕಾರದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಶರ್ಮಾ ಅವರಿಗೆ ಸೂಚಿಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.
.ಅಸ್ಸಾಂ ಸಿಎಂ ಸ್ಥಾನಕ್ಕೆ ಶರ್ಮಾ ರಾಜೀನಾಮೆ: ಮೇ 11ರ ಬಳಿಕ ಪ್ರಮಾಣ ವಚನ ಸಾಧ್ಯತೆ.
ನವದೆಹಲಿ: ಜೈವಿಕ ತಂತ್ರಜ್ಞಾನ ವಲಯದ ಪ್ರಮುಖ ಕಂಪನಿಯಾದ ಬಯೊಕಾನ್ಗೆ ಉತ್ತರಾಧಿಕಾರಿಯಾಗಿ ಸೋದರನ ಮಗಳು ‘ಕ್ಲೇರ್ ಮಜುಂದಾರ್’ ಅವರನ್ನು ಆಯ್ಕೆ ಮಾಡಿರುವುದಾಗಿ ಕಿರಣ್ ಮಜುಂದಾರ್ ಷಾ ಘೋಷಿಸಿದ್ದಾರೆ.
.ಬಯೊಕಾನ್ಗೆ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಷಾ: ಇಲ್ಲಿದೆ ವಿವರ.
‘ಸು ಫ್ರಂ ಸೋ’ ಸಿನಿಮಾ ಮೂಲಕ ಖ್ಯಾತಿ ಪಡೆದ ನಟ, ನಿರ್ದೇಶಕ ಜೆ.ಪಿ.ತೂಮಿನಾಡು ಅವರು ರಶ್ಮಿಕಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಸದ್ಯ ಇವರ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
.ರಶ್ಮಿಕಾ ಜೊತೆ ಹಸೆಮಣೆ ಏರಿದ ‘ಸು ಫ್ರಂ ಸೋ’ ಖ್ಯಾತಿಯ ಜೆ.ಪಿ. ತೂಮಿನಾಡು.
ಇಸ್ಲಾಮಾಬಾದ್: ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಆರಂಭಿಸಿದ್ದ ‘ಪ್ರಾಜೆಕ್ಟ್ ಫ್ರೀಡಂ’ ಅನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸ್ವಾಗತಿಸಿದ್ದು, ಟ್ರಂಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
.‘ಪ್ರಾಜೆಕ್ಟ್ ಫ್ರೀಡಂ’ ಸ್ಥಗಿತಗೊಳಿಸಿದ ಟ್ರಂಪ್ಗೆ ಪಾಕ್ ಪ್ರಧಾನಿ ಧನ್ಯವಾದ .
ಮುಂಬೈ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
.ಶಾಸಕರ ಟಿಕೆಟ್ ದಾಹ: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ಗೆ ಶಿಫ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.