ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಟಿ20 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಕಾಶ್ಮೀರ ಆಹ್ವಾನ

Published 1 ಜುಲೈ 2024, 4:49 IST
Last Updated 1 ಜುಲೈ 2024, 4:49 IST
ಅಕ್ಷರ ಗಾತ್ರ

ಶ್ರೀನಗರ: ಈ ಬಾರಿಯ ಟಿ20 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ ಕ್ರಿಕೆಟ್‌ ತಂಡವನ್ನು ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಇಲಾಖೆ ಅಭಿನಂದಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವಂತೆ ‘ಟೀಮ್ ಇಂಡಿಯಾ‘ಗೆ ಆಹ್ವಾನ ನೀಡಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರವಾಸೋದ್ಯಮ ಇಲಾಖೆ, ‘ಟಿ20 ವಿಶ್ವಕಪ್ 2024ರ ವಿಜೇತ ತಂಡವಾಗಿ ಹೊರಹೊಮ್ಮಿರುವ ಭಾರತ ತಂಡಕ್ಕೆ ಅಭಿನಂದನೆಗಳು!!. ನಮ್ಮ ಚಾಂಪಿಯನ್ಸ್‌ಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಬಹುದು. ನಿಮಗೆ ಆತಿಥ್ಯ ನೀಡುವುದು ನಮ್ಮ ಗೌರವವಾಗಿದೆ‘ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಜೂನ್ 29ರಂದು ನಡೆದ ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಭಾರತ ಸೋಲಿಸಿತು. ಈ ಮೂಲಕ 17 ವರ್ಷಗಳ ಬಳಿಕ ಭಾರತ ಟಿ20 ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT