ಶಿಲ್ಲಾಂಗ್(ಮೇಘಾಲಯ): ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದ್ದು, ಪತ್ನಿಯೇ ಪತಿಯ ಕೊಲೆಗೆ ಸುಪಾರಿ ನೀಡಿರುವುದಾದಾಗಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
ADVERTISEMENT
ADVERTISEMENT
‘ಹತ್ಯೆಯಾದ ರಾಜ ರಘುವಂಶಿ ಅವರ ಪತ್ನಿ ಸೋನಮ್ ಪೊಲೀಸರ ಮುಂದೆ ಶರಣಾಗಿದ್ದಾರೆ’ ಎಂದು ಮೇಘಾಲಯ ಡಿಜಿಪಿಐ ನೊಂಗ್ರಾಂಗ್ ತಿಳಿಸಿದ್ದಾರೆ.
‘ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಮಧ್ಯಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ’ ಎಂದಿದ್ದಾರೆ.
‘ಉತ್ತರ ಪ್ರದೇಶದ ಗಾಜಿಪುರದ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಸೋನಮ್ ಶರಣಾಗಿದ್ದು, ನಂತರ ಅವರನ್ನು ಬಂಧಿಸಲಾಯಿತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಎಸ್‌ಐಟಿ, ಒಬ್ಬ ಆರೋಪಿಯನ್ನು ಉತ್ತರ ಪ್ರದೇಶದಲ್ಲಿ, ಇನ್ನಿಬ್ಬರು ಆರೋಪಿಗಳನ್ನು ಇಂದೋರ್‌ನಲ್ಲಿ ಬಂಧಿಸಿದೆ’ ಎಂದು ಮಾಹಿತಿ ನೀಡಿದ್ದಾರೆ.
ರಘುವಂಶಿ ಅವರನ್ನು ಕೊಲ್ಲುವಂತೆ ಅವರ ಪತ್ನಿಯೇ ತಮಗೆ ಸುಪಾರಿ ನೀಡಿರುವುದಾಗಿ ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೇ 11ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ರಾಜ ರಘುವಂಶಿ ಮತ್ತು ಸೋನಮ್, ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಮೇ 23ರಂದು ದಂಪತಿ ಕಾಣೆಯಾಗಿದ್ದು, ಜೂನ್ 2ರಂದು ರಘುವಂಶಿ ಅವರ ಶವ ಜಲಪಾತದ ಕಮರಿಯಲ್ಲಿ ಸಿಕ್ಕಿತ್ತು. ಸೋನಮ್‌ಗಾಗಿ ಪೊಲೀಸರು ಶೋಧ ನಡೆಸಿದ್ದರು.