ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಡಿಬಾಗ ಸೇತುವೆ ಕುಸಿತ: ಗೋವಾ–ಕಾರವಾರ ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ

Published : 7 ಆಗಸ್ಟ್ 2024, 4:46 IST
Last Updated : 7 ಆಗಸ್ಟ್ 2024, 4:46 IST
ಫಾಲೋ ಮಾಡಿ
Comments

ಪಣಜಿ: ಕಾರವಾರ ಬಳಿ ಕೋಡಿಬಾಗದಲ್ಲಿರುವ ಕಾಳಿ ಸೇತುವೆಯು ಮಂಗಳವಾರ ತಡರಾತ್ರಿ ಕುಸಿದು ಬಿದ್ದಿದ್ದರಿಂದ ಗೋವಾ–ಕಾರವಾರ ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಮಾರ್ಗದಲ್ಲಿರುವ ಈ ಸೇತುವೆ ಕರ್ನಾಟಕ– ಗೋವಾ ಸಂಪರ್ಕಿಸುವ ಪ್ರಮಖ ಮಾರ್ಗವಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರಲ್ಲಿನ ಕಾಳಿ ನದಿಗೆ ಎರಡು ಸೇತುವೆಗಳಿವೆ.

ಕೋಡಿಬಾಗ ಸೇತುವೆ ಕುಸಿದಿರುವುದರಿಂದ ಗೋವಾದಿಂದ ಕಾರವಾರ ಕಡೆಗೆ ಹೋಗುವ ವಾಹನಗಳಿಗೆ ಭಾರಿ ಸಮಸ್ಯೆ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಕಾಣಕೋಣ ಪೊಲೀಸ್ ಇನ್‌ಸ್ಪೆಕ್ಟರ್ ಹರೀಶ್ ದೇಸಾಯಿ ತಿಳಿಸಿದ್ದಾರೆ.

ರಾತ್ರಿ 1 ಗಂಟೆ ವೇಳೆಗೆ ಕಾಳಿ ನದಿಯ ಹಳೆಯ ಸೇತುವೆಯು ಮೂರು ಕಡೆಗಳಲ್ಲಿ ಏಕಾಏಕಿ ಮುರಿದು ಬಿದ್ದಿತ್ತು. ಸೇತುವೆ ಮೇಲೆ ಸಾಗುತ್ತಿದ್ದ ಗೋವಾದಿಂದ ಕಾರವಾರ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ. ಲಾರಿ ಚಾಲಕನನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT