ನವದೆಹಲಿ: ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ಚಾಲನಾ ಪರವಾನಗಿಯನ್ನು ಆರು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ರದ್ದುಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಚಿಂತಿಸುತ್ತಿದೆ ಎಂದು ಸಾರಿಗೆ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ.

ಪ್ರತಿ ಸಂಚಾರ ನಿಯಮ ಉಲ್ಲಂಘನೆಗೆ ಒಂದು ಪಾಯಿಂಟ್ ಎಂದು ನೀಡಲಾಗುವುದು. ಇಂತಹ 12 ಪಾಯಿಂಟ್ಗಳು ಸೇರಿಕೊಂಡಲ್ಲಿ ಆರು ತಿಂಗಳ ಕಾಲ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಣ್ಣಪುಟ್ಟ ಸಂಚಾರ ನಿಯಮ ಉಲ್ಲಂಘನೆಗಳಿಗೆ ಹೊರತಾದ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಸೇರಿದಂತೆ ಗಂಭೀರ ಸ್ವರೂಪದ ತಪ್ಪು ಎಸಗುವವರ ಪರವಾನಗಿಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಸಂಚಾರ ನಿಯಮ ಉಲ್ಲಂಘನೆಯಾಗುತ್ತಿರುವ 100 ಜಿಲ್ಲೆಗಳನ್ನು ಗುರುತಿಸಲಾಗಿದ್ದು, ಎಲ್ಲೆಡೆ ಹೊಸ ಪಾಯಿಂಟ್ ಜಾರಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.