ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಲ್ಲಿ ಗುಂಡಿನ ದಾಳಿ: ಆರ್‌ಪಿಎಫ್ ಕಾನ್‌ಸ್ಟೆಬಲ್ ಸೇವೆಯಿಂದ ವಜಾ

Published 17 ಆಗಸ್ಟ್ 2023, 4:37 IST
Last Updated 17 ಆಗಸ್ಟ್ 2023, 4:37 IST
ಅಕ್ಷರ ಗಾತ್ರ

ಮುಂಬೈ: ಕಳೆದ ತಿಂಗಳು ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿನ್ಹಾ ಚೌಧರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ.

ಆರ್‌ಪಿಎಫ್ ವಿಭಾಗೀಯ ಭದ್ರತಾ ಆಯುಕ್ತರು, ಚೌಧರಿಯನ್ನು ವಜಾಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜುಲೈ 31ರಂದು ಮುಂಬೈ ಹೊರವಲಯದಲ್ಲಿ ಪಾಲ್ಘರ್ ರೈಲು ನಿಲ್ದಾಣದ ಸಮೀಪ ಜೈಪುರ-ಮುಂಬೈ ಸೂಪರ್ ಫಾಸ್ಟ್ ರೈಲಿನಲ್ಲಿ ಚೌಧರಿ (34) ತನ್ನ ಹಿರಿಯ ಅಧಿಕಾರಿ, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕರಾಮ್ ಮೀನಾ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ರೈಲಿನ ಬೇರೆ ಬೇರೆ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸಯ್ಯದ್ ಸಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಕನಿಷ್ಠ ಮೂರು ಶಿಸ್ತು ಕ್ರಮ ಸಂಬಂಧಿತ ಘಟನೆಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಚೌಧರಿ ನ್ಯಾಯಾಂಗ ಬಂಧನದಲ್ಲಿದ್ದು, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT