ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ | ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರು ಮಂದಿ ಬಂಧನ

Published 21 ಆಗಸ್ಟ್ 2024, 9:35 IST
Last Updated 21 ಆಗಸ್ಟ್ 2024, 9:35 IST
ಅಕ್ಷರ ಗಾತ್ರ

ರಾಯ್‌ಗಢ: ಛತ್ತೀಸಗಢದ ರಾಯ್‌ಗಢ ಜಿಲ್ಲೆಯಲ್ಲಿ 27 ವರ್ಷದ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಆರು ಮಂದಿಯನ್ನು ಬಂಧಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯು ರಕ್ಷಾ ಬಂಧನ ಹಬ್ಬವನ್ನು ಆಚರಿಸಿ, ಸ್ಥಳೀಯ ಜಾತ್ರೆಗೆ ತೆರಳುತ್ತಿದ್ದ ವೇಳೆ ಆರೋಪಿಗಳು ಆಕೆಯನ್ನು ಅಡ್ಡಗಟ್ಟಿ, ಬಲವಂತವಾಗಿ ಹತ್ತಿರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದ್ದು, ಇದುವರೆಗೂ ಆರು ಮಂದಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್,ಈ ಘಟನೆಯು ಅತ್ಯಂತ ಗಂಭೀರವಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವವರೆಗೂ ಸಂತ್ರಸ್ತೆಗೆ ರಕ್ಷಣೆ ಒದಗಿಸಬೇಕು. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನೂ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT