ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಂಧ್ರಪ್ರದೇಶ: ವೃದ್ಧೆಯನ್ನು ಡೋಲಿಯಲ್ಲಿ ಹೊತ್ತುಕೊಂಡು ಬಂದು ಮತದಾನ ಮಾಡಿಸಿದರು

Published 13 ಮೇ 2024, 7:21 IST
Last Updated 13 ಮೇ 2024, 7:21 IST
ಅಕ್ಷರ ಗಾತ್ರ

ಹೈದರಾಬಾದ್‌: ಲೋಕಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಆಂಧ್ರ ಪ್ರದೇಶದ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

ಈ ನಡುವೆ ಬುಡಕಟ್ಟು ಸಮುದಾಯಕ್ಕೆ ಸೇರಿದ ವೃದ್ಧೆಯೊಬ್ಬರನ್ನು ಡೋಲಿ ಮೂಲಕ ಮತಗಟ್ಟೆ ತರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರಿಯಾದ ರಸ್ತೆ ಸಂಪರ್ಕವಿಲ್ಲದೆ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದವರಿಗೆ ಮತ ಚಲಾಯಿಸುವುದೇ ಒಂದು ದೊಡ್ಡ ಸಮಸ್ಯೆಯಾಗಿದೆ. ಈ ನಡುವೆ ಕಲ್ಲು ಮುಳ್ಳಿನ ಹಾದಿಯಲ್ಲಿ ವೃದ್ಧೆಯೊಬ್ಬರನ್ನು ಡೋಲಿ ಮೂಲಕ ಹೆಗಲ ಮೇಲೆ ಹೊತ್ತುಕೊಂಡು ಮತಗಟ್ಟೆಗೆ ಕರೆತಂದಿದ್ದಾರೆ.

ಚುನಾವಣೆ ಸಂದರ್ಭ ಕೆಲವೆಡೆ ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ. ಇನ್ನೊಂದೆಡೆ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಕೇಳಿಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT