ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮನಮೋಹನ ಸಿಂಗ್ ಅಂತ್ಯಕ್ರಿಯೆ ಇಂದು: ಧೀಮಂತ ನಾಯಕನಿಗೆ ಮಿಡಿದ ದೇಶ

Published : 27 ಡಿಸೆಂಬರ್ 2024, 23:30 IST
Last Updated : 27 ಡಿಸೆಂಬರ್ 2024, 23:30 IST
ಫಾಲೋ ಮಾಡಿ
Comments
ಮನಮೋಹನ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೌರವ ಸಲ್ಲಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಂಗ್‌ ಅವರ ಕುಟುಂಬದ ಸದಸ್ಯರು ಇದ್ದಾರೆ

ಮನಮೋಹನ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೌರವ ಸಲ್ಲಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಂಗ್‌ ಅವರ ಕುಟುಂಬದ ಸದಸ್ಯರು ಇದ್ದಾರೆ

–ಪಿಟಿಐ ಚಿತ್ರ

ಏಳು ದಿನ ಶೋಕಾಚರಣೆ
ಮನಮೋಹನ ಸಿಂಗ್ ಅವರ ಗೌರವಾರ್ಥವಾಗಿ ದೇಶದಾದ್ಯಂತ ಏಳು ದಿನಗಳ ಶೋಕ ಆಚರಿಸಲಾಗುತ್ತದೆ ಮತ್ತು ಈ ಅವಧಿಯಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ‘ಸಿಂಗ್ ಅವರ ಗೌರವಾರ್ಥವಾಗಿ 2024ರ ಡಿಸೆಂಬರ್‌ 26ರಿಂದ 2025ರ ಜನವರಿ 1ರವರೆಗೆ ದೇಶದಾದ್ಯಂತ ಶೋಕಾಚರಣೆ ನಡೆಯಲಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ’ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ‘ಅಂತ್ಯಕ್ರಿಯೆ ನಡೆಯುವ ದಿನ ವಿದೇಶದಲ್ಲಿರುವ ಭಾರತದ ಎಲ್ಲ ರಾಯಭಾರ ಕಚೇರಿಗಳು ಮತ್ತು ಹೈಕಮಿಷನ್‌ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು’ ಎಂದು ಹೇಳಿದೆ.
ಸಮಾಧಿ: ಪ್ರತ್ಯೇಕ ಸ್ಥಳಕ್ಕೆ ಮನವಿ
ಮನಮೋಹನ ಸಿಂಗ್‌ ಅವರ ಸಮಾಧಿಗೆ ಯಮುನಾ ನದಿ ದಂಡೆಯ ರಾಜ್‌ಘಾಟ್‌ನಲ್ಲಿ ಪ್ರತ್ಯೇಕ ಸ್ಥಳ ನೀಡಬೇಕು ಎಂದು ಕಾಂಗ್ರೆಸ್‌ ಪಕ್ಷವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ರಾಜ್‌ಘಾಟ್‌ನಲ್ಲಿ ಹಲವು ಮಾಜಿ ಪ್ರಧಾನಿಗಳ ಸ್ಮಾರಕಗಳು ಇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಳಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಗಾಂಧಿ ಕುಟುಂಬದ ಹೊರಗಿನ ನಾಯಕರನ್ನು ನಿರ್ಲಕ್ಷಿಸುತ್ತದೆ ಎಂಬ ಆರೋಪವನ್ನು ಎದುರಿಸುತ್ತಿರುವ ಸಮಯದಲ್ಲೇ ಈ ಬೇಡಿಕೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT