ಅಗರ್ತಲಾ: ವಿದ್ಯಾರ್ಥಿ ವೇತನ ಪಡೆಯಲು ಸುಳ್ಳು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸಿದ್ದಕ್ಕಾಗಿ 34 ಎಸ್ಟಿ ವಿದ್ಯಾರ್ಥಿಗಳಿಗೆ ತ್ರಿಪುರಾ ಸರ್ಕಾರ ಷೋಕಾಸ್ ನೋಟಿಸ್ ನೀಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2023-24ನೇ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್ಎಸ್ಪಿ) ಮೂಲಕ 35,665 ಎಸ್ಟಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರು ಎಂದು ಬುಡಕಟ್ಟು ಕಲ್ಯಾಣ ಇಲಾಖೆಯ ನಿರ್ದೇಶಕ ಸುಭಾಶಿಶ್ ದಾನ್ ಹೇಳಿದ್ದಾರೆ.

‘ಅಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ 34 ಎಸ್ಟಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ್ದು, ನಕಲಿ ಆದಾಯ ಪ್ರಮಾಣಪತ್ರಗಳನ್ನು ಅಪ್ಲೋಡ್ ಮಾಡಿದ್ದಾರೆ ಎಂದು ತಿಳಿದುಬಂದಿದೆ’ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ ಪಡೆಯಲು ಇಂತಹ ನಕಲಿ ಆದಾಯ ಪ್ರಮಾಣಪತ್ರಗಳನ್ನು ಸಲ್ಲಿಸುವುದು ಕ್ರಿಮಿನಲ್ ಅಪರಾಧವಾಗಿದೆ. ಈ ಕುರಿತು ಎಫ್ಐಆರ್ ಏಕೆ ದಾಖಲಿಸಬಾರದು ಎಂದು ಕಾರಣ ಕೇಳಿ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಏಪ್ರಿಲ್ 16ರೊಳಗೆ ನೋಟಿಸ್ಗೆ ಉತ್ತರಿಸುವಂತೆ ತಿಳಿಸಲಾಗಿದೆ.
.ಪಂಜಾಬ್ | 17.70ಗ್ರಾಂ ಹೆರಾಯಿನ್ ವಶ: ಮಹಿಳಾ ಕಾನ್ಸ್ಟೆಬಲ್ ಬಂಧನ.IPL 2025: ಕೊಹ್ಲಿಗೆ ಬೌಲಿಂಗ್ ಮಾಡಲು ಹಿಂಜರಿದ ಸಿರಾಜ್; ಕಾರಣ ಏನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.