ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪುರಾ: 27 ಕ್ಷೇತ್ರಗಳಲ್ಲಿ ಬಿಜೆಪಿ, 17ರಲ್ಲಿ ಕಾಂಗ್ರೆಸ್–ಎಡಪಕ್ಷಗಳ ಮುನ್ನಡೆ

Last Updated 2 ಮಾರ್ಚ್ 2023, 6:37 IST
ಅಕ್ಷರ ಗಾತ್ರ

ತ್ರಿಪುರಾ: ತ್ರಿಪುರಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೆ ಅಧಿಕಾರದ ಗದ್ದುಗೆ ಏರುವ ಸೂಚನೆ ಸಿಕ್ಕಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು 17 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.

ತಿಪ್ರಾ ಮೋಥಾ 12 ಕ್ಷೇತ್ರಗಳಲ್ಲಿ, ಬಿಜೆಪಿ ಮಿತ್ರಪಕ್ಷ ಐಪಿಎಫ್‌ಟಿ ಒಂದು ಕ್ಷೇತ್ರದಲ್ಲಿ ಮುನ್ನಡೆದ ಪಡೆದಿವೆ. ಒಬ್ಬ ಪಕ್ಷೇತರ ಅಭ್ಯರ್ಥಿ ಸಹ ಮುನ್ನಡೆ ಪಡೆದಿದ್ದರು.

ಸಿಪಿಎಂ 12 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ.

ಮುಖ್ಯಮಂತ್ರಿ ಮಾಣಿಕ್ ಸಹಾ ಟೌನ್ ಬರಡ್ಓವಾಲಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಗರ್ತಲಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸುದೀಪ್ ರಾಯ್ ಬರ್ಮನ್ ಅವರು ಬಿಜೆಪಿಯ ಪಪಿಯಾ ದತ್ತಾ ಅವರನ್ನು ಹಿಂದಿಕ್ಕಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಭಟ್ಟಾಚಾರ್ಯ ಬನಮಾಲಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ರಾಯ್ ಎದುರು ಹಿನ್ನಡೆ ಅನುಭವಿಸಿದ್ದಾರೆ.

ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಧನಪುರ್ ಕ್ಷೇತ್ರದಲ್ಲಿ ಸಿಪಿಎಂನ ಕೌಶಿಕ್ ಚಂಡಾ ಅವರನ್ನು ಹಿಂದಿಕ್ಕಿದ್ದಾರೆ.

ಖಯೇರ್‌ಪುರ್ ಕ್ಷೇತ್ರದಲ್ಲಿ ವಿಧಾನಸಭೆಯ ಸ್ಪೀಕರ್ ರತನ್ ಚಕ್ರವರ್ತಿ ಮುನ್ನಡೆಯಲ್ಲಿದ್ದಾರೆ. ಕೈಲಾಶಹರ್ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿರಜಿತ್ ಸಿಂಗ್ ಅವರು ಮುನ್ನಡೆ ಪಡೆದಿದ್ದಾರೆ.

(ಬೆಳಿಗ್ಗೆ 11.30ರವರೆಗಿನ ಅಪ್‌ಡೇಟ್ಸ್)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT