ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ | ಟ್ರಕ್‌–ಜೀಪ್‌–ಬೈಕ್‌ ನಡುವೆ ಡಿಕ್ಕಿ: ಒಂಬತ್ತು ಮಂದಿ ಸಾವು

Published 26 ಫೆಬ್ರುವರಿ 2024, 2:52 IST
Last Updated 26 ಫೆಬ್ರುವರಿ 2024, 2:52 IST
ಅಕ್ಷರ ಗಾತ್ರ

ಕೈಮೂರ್‌: ಬಿಹಾರದ ಕೈಮೂರ್‌ ಜಿಲ್ಲೆಯಲ್ಲಿ ಭಾನುವಾರ ಸಂಜೆ ಟ್ರಕ್‌, ಜೀಪ್‌ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಾನಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ದೇವಕಾಲಿ ಗ್ರಾಮದ ಬಳಿಯ ಜಿಟಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

'ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್‌, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್‌ ಮತ್ತು ಬೈಕ್‌ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್‌ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಬೈಕ್‌ ಸವಾರ ಸೇರಿದಂತೆ ಎಲ್ಲಾ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್‌ ಕುಮಾರ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಪಘಾತದ ನಂತರ ಟ್ರಕ್‌ ಚಾಲಕ ಪರಾರಿಯಾಗಿದ್ದಾನೆ. ಟ್ರಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಮೃತ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

‘ಅಪಘಾತ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ’ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ.

ಅಪಘಾತ ಸ್ಥಳಕ್ಕೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT