ನವದೆಹಲಿ: ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ನಿಟ್ಟಿನಲ್ಲಿ ಇರಾನ್ ಜೊತೆಗಿನ ಮಾತುಕತೆಯಲ್ಲಿ ಅಮೆರಿಕ ಮಹತ್ವದ ಪ್ರಗತಿ ಸಾಧಿಸಿದೆ. ಆದರೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವಿಷಯದಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದು, ಯಾವುದೇ ಕಾರಣಕ್ಕೂ ದೇಶಕ್ಕೆ ಹಾನಿಕಾರಕವಾಗುವ ಕೆಟ್ಟ ಒಪ್ಪಂದಕ್ಕೆ ಸಹಿ ಹಾಕುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಸೋಮವಾರ ತಿಳಿಸಿದ್ದಾರೆ.

ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ರುಬಿಯೊ, ಆಗ್ರಾಕ್ಕೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಂತಿ ಒಪ್ಪಂದಕ್ಕೂ ಮುನ್ನ ಜಲಮಾರ್ಗವನ್ನು ಮುಕ್ತಗೊಳಿಸಲು ಅಮೆರಿಕ ಮತ್ತು ಇರಾನ್ ನಡುವೆ ಪ್ರಾಥಮಿಕ ಮಾತುಕತೆಗಳು ನಡೆಯುತ್ತಿರುವುದರ ನಡುವೆಯೇ ಅವರ ಈ ಹೇಳಿಕೆ ನೀಡಿದ್ದಾರೆ.

‘ಮಾತುಕತೆಗಳು ಇನ್ನೂ ಪ್ರಗತಿಯಲ್ಲಿವೆ. ನಿನ್ನೆ ರಾತ್ರಿಯೇ ನಮಗೆ ಒಳ್ಳೆಯ ಸುದ್ದಿ ಸಿಗಬಹುದು ಎಂದು ಭಾವಿಸಿದ್ದೆವು. ಜಲಸಂಧಿಯನ್ನು ಮುಕ್ತಗೊಳಿಸುವ ಮತ್ತು ಪರಮಾಣು ವಿಷಯಗಳ ಬಗ್ಗೆ ಗಂಭೀರ ಮಾತುಕತೆ ನಡೆಸುವ ಕುರಿತು ಸದ್ಯ ಪ್ರಸ್ತಾವನೆ ಅವರ ಮುಂದಿಟ್ಟಿದ್ದೇವೆ. ಇದು ಯಶಸ್ವಿಯಾಗುವ ವಿಶ್ವಾಸವಿದೆ’ ಎಂದು ರುಬಿಯೊ ಹೇಳಿದರು.

‘ರಾಜತಾಂತ್ರಿಕ ಮಾರ್ಗದ ಮೂಲಕ ಪರಿಹಾರ ಕಂಡುಕೊಳ್ಳಲು ನಾವು ಎಲ್ಲಾ ರೀತಿಯ ಅವಕಾಶಗಳನ್ನು ನೀಡುತ್ತಿದ್ದೇವೆ. ಒಂದು ವೇಳೆ ಇದು ವಿಫಲವಾದರೆ ಬೇರೆ ಮಾರ್ಗಗಳನ್ನು ಹುಡುಕಬೇಕಾಗುತ್ತದೆ. ಆದರೆ ಅಧ್ಯಕ್ಷ ಟ್ರಂಪ್ ಎಂದಿಗೂ ದುರ್ಬಲ ಒಪ್ಪಂದವನ್ನು ಒಪ್ಪುವುದಿಲ್ಲ.

ಪ್ರಸ್ತುತ 45 ದಿನಗಳ ಕದನ ವಿರಾಮ ಜಾರಿಯಲ್ಲಿದ್ದು, ಇಸ್ರೇಲ್ ಮತ್ತು ಲೆಬನಾನ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಇಲ್ಲಿ ಸಮಸ್ಯೆ ಇಸ್ರೇಲ್ ಅಥವಾ ಲೆಬನಾನ್ ಅಲ್ಲ, ಬದಲಿಗೆ ಹಿಜ್ಬುಲ್ಲಾ ಉಗ್ರ ಸಂಘಟನೆ ಇದೆ’ ಎಂದು ರುಬಿಯೊ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.