ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಸೋಮವಾರ ಸಂಭಾಷಣೆ ನಡೆಸಿದ್ದಾರೆ.

ಎರಡೂ ದೇಶಗಳ ನಾಯಕರು ಮಾತುಕತೆ ನಡೆಸಿರುವುದನ್ನು ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೊರ್ ಅವರು ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಖಚಿತಪಡಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ವಾಷಿಂಗ್ಟನ್ಗೆ ಮೂರು ದಿನಗಳ ಭೇಟಿಯನ್ನು ಪ್ರಾರಂಭಿಸಿದ ದಿನದಂದೇ ಈ ಮಾತುಕತೆ ನಡೆದಿದೆ.

‘ಅಧ್ಯಕ್ಷ ಟ್ರಂಪ್ ಅವರು ಇದೀಗ ಮೋದಿ ಜತೆ ಮಾತನಾಡಿದ್ದಾರೆ. ಮಾತುಕತೆಯ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಿ’ ಎಂದು ಗೊರ್ ಹೇಳಿದ್ದಾರೆ. ಈ ಮಾತುಕತೆ ಬಗ್ಗೆ ಭಾರತ ಯಾವುದೇ ಹೇಳಿಕೆ ನೀಡಿಲ್ಲ.

ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲು ಮತ್ತು ಹದಗೆಟ್ಟಿರುವ ಸಂಬಂಧವನ್ನು ಮರುಸ್ಥಾಪಿಸಲು ಎರಡೂ ದೇಶಗಳಿಂದ ಪ್ರಯತ್ನ ಮುಂದುವರಿದಿದೆ. ಇದೇ ಪ್ರಯತ್ನದ ಭಾಗವಾಗಿ ಜೈಶಂಕರ್ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ 25ರಷ್ಟು ಸುಂಕ ಹಾಗೂ ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವುದಕ್ಕೆ ದಂಡನೆಯಾಗಿ ಹೆಚ್ಚುವರಿಯಾಗಿ ಶೇ 25ರಷ್ಟು ಹೆಚ್ಚುವರಿ ಸುಂಕ ಸೇರಿದಂತೆ ಒಟ್ಟು ಶೇ 50ರಷ್ಟು ಸುಂಕವನ್ನು ಟ್ರಂಪ್ ಹೇರಿದ ಬಳಿಕ ಎರಡೂ ದೇಶಗಳ ಸಂಬಂಧ ವಿಷಮಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.