ವಾಷಿಂಗ್ಟನ್: ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಪಾಕಿಸ್ತಾನಗಳು ನೆರವು ಕೇಳಿದರೆ, ನೆರವು ನೀಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಿದ್ಧರಿದ್ದಾರೆ. ಅವರು ಕಾಶ್ಮೀರ ಸಮಸ್ಯೆ ಕುರಿತು ಹೆಚ್ಚು ಗಮನಹರಿಸುತ್ತಿದ್ದಾರೆ ಎಂದು ಅಮೆರಿಕದ ಶ್ವೇತಭವನದ ಮೂಲಗಳು ಹೇಳಿವೆ.

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಟ್ರಂಪ್ ಮತ್ತು ಭಾರತದ ಪ್ರಧಾನಿನರೇಂದ್ರ ಮೋದಿಅವರು ಮಾತುಕತೆ ನಡೆಸುವ ಸಾಧ್ಯತೆ ಇದೆ. ಕಾಶ್ಮೀರದ ಸಮಸ್ಯೆಯಿಂದ ದಕ್ಷಿಣ ಏಷ್ಯಾದಲ್ಲಿ ಶಾಂತಿ ಕದಡುವ ಅಪಾಯವಿದೆ. ಹೀಗಾಗಿ ಆ ಸಮಸ್ಯೆಯನ್ನು ಇತ್ಯರ್ಥಪಡಿಸಲು ಟ್ರಂಪ್ ಉತ್ಸುಕರಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ:ಕಾಶ್ಮೀರ ವಿಚಾರದಲ್ಲಿ ಹಸ್ತಕ್ಷೇಪ ಸಲ್ಲ: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್

‘ಕಾಶ್ಮೀರ ಸಮಸ್ಯೆಯನ್ನು ಹೇಗೆ ಬಗೆಹರಿಸಿಕೊಳ್ಳುತ್ತೀರಿ? ಅಲ್ಲಿ ಶಾಂತಿ ನೆಲೆಸಲು ಯಾವ ಕ್ರಮ ತೆಗೆದುಕೊಳ್ಳುತ್ತೀರಿ ಮತ್ತು ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು ಕಾಶ್ಮೀರಿ ಜನರ ಮಾನವ ಹಕ್ಕುಗಳನ್ನು ಹೇಗೆ ಎತ್ತಿಹಿಡಿಯುತ್ತದೆ’ ಎಂಬ ಪ್ರಶ್ನೆಗಳನ್ನು ಟ್ರಂಪ್ ಅವರು ಮೋದಿ ಅವರ ಮುಂದೆ ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ:ಕಾಶ್ಮೀರ: ಮಧ್ಯಸ್ಥಿಕೆಗೆ ಟ್ರಂಪ್ ಮತ್ತೆ ಸಿದ್ಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.