ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Chennai-Bengaluru Greenfield Expressway ಡಿಸೆಂಬರ್ ವೇಳೆಗೆ ಪೂರ್ಣ: ಗಡ್ಕರಿ

Published 8 ಫೆಬ್ರುವರಿ 2024, 9:23 IST
Last Updated 8 ಫೆಬ್ರುವರಿ 2024, 9:23 IST
ಅಕ್ಷರ ಗಾತ್ರ

ನವದೆಹಲಿ: ಚೆನ್ನೈ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ ವೇ ಪ್ರಸಕ್ತ ಸಾಲಿನಲ್ಲೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ನಿತಿನ್ ಗಡ್ಕರಿ ಮಾಹಿತಿ ನೀಡಿದರು. ಆಯಾ ಸರ್ಕಾರಗಳು ನಿರ್ಮಾಣ ಸಾಮಾಗ್ರಿಗಳನ್ನು ಲಭ್ಯವಾಗುವಂತೆ ಮಾಡಲು ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೆರವಾಗುವಂತೆ ಅವರು ಒತ್ತಾಯಿಸಿದ್ದಾರೆ.

ಡಿಸೆಂಬರ್‌ಗೂ ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಪಯತ್ನಿಸುತ್ತಿದ್ದೇವೆ ಎಂದು ನಾನು ಈ ಸದನಕ್ಕೆ ಭರವಸೆ ನೀಡುತ್ತೇನೆ. ಈ ರಸ್ತೆ ನಿರ್ಮಾಣದಿಂದ ಚೆನ್ನೈ ಹಾಗೂ ಬೆಂಗಳೂರು ನಡುವಣ ಅಂತರವನ್ನು ಎರಡು ಗಂಟೆಗಳಲ್ಲಿ ಕ್ರಮಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹೆದ್ದಾರಿ ನಿರ್ಮಾಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಚರ್ಚೆ ನಡೆಸಿರುವುದಾಗಿ ಅವರು ತಿಳಿಸಿದರು.

ಡಿಎಂಕೆ ಸದಸ್ಯ ದಯಾನಿಧಿ ಮಾರನ್ ಅವರ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ನಾನು ಈ ವಿಷಯವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಆದರೆ ರಸ್ತೆ ನಿರ್ಮಾಣಕ್ಕೆ ಅಗತ್ಯ ವಸ್ತುಗಳನ್ನು ಪಡೆಯದೇ ಹೆದ್ದಾರಿ ಪೂರ್ಣಗೊಳಿಸಲು ಹೇಗೆ ಸಾಧ್ಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT