ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ಅವರು ಮಹಿಳೆಯೊಬ್ಬರನ್ನು ತಬ್ಬಿಕೊಂಡ ದೃಶ್ಯವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ, ಸಾರ್ವಜನಿಕ ವಲಯದಲ್ಲಿ ಅವರ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿವೆ.

ನಾಯ್ಡು ಅವರು ತೆಲುಗು ಸ್ಯಾಟಲೈಟ್ ಸುದ್ದಿವಾಹಿನಿ ‘ಟಿವಿ–5’ನ ಮಾಲೀಕರಾಗಿದ್ದು, ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ‘ಡೀಪ್ಫೇಕ್’ ತಂತ್ರಜ್ಞಾನ ಬಳಸಿ, ಈ ದೃಶ್ಯ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಯ್ಡು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ವಿರೋಧ ಪಕ್ಷ ವೈಎಸ್ಆರ್ಸಿಪಿ ಆಗ್ರಹಿಸಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಟಿಟಿಡಿ ಮಾಜಿ ಅಧ್ಯಕ್ಷ ಕರುಣಾಕರ್ ರೆಡ್ಡಿ, ‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದ ಬಿ.ಆರ್.ನಾಯ್ಡು ಅವರ ವಿಡಿಯೊ ಹಾಗೂ ಫೋಟೊಗಳನ್ನು ಎ.ಐ ಪರಿಶೀಲನೆಗಾಗಿ ಕಳುಹಿಸಿಕೊಡಲಾಗಿತ್ತು. ಅದು ನೈಜವೆಂದು ಕಂಡುಬಂದಿದೆ. ನಾಯ್ಡು ಅವರು ತಿಳಿಸಿದಂತೆ, ತಂತ್ರಜ್ಞಾನ ತಯಾರಿಸಿ ನಿರ್ಮಿಸಿಲ್ಲ’ ಎಂದು ವಿವರಿಸಿದ್ದಾರೆ.

‘ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟಿಟಿಡಿ ಅಧ್ಯಕ್ಷ ಸ್ಥಾನಕ್ಕೆ ಪ್ರಶ್ನಾರ್ಹವಾದ ವ್ಯಕ್ತಿಯನ್ನು ನೇಮಿಸಿದ್ದಾರೆ. ಇದು ಅವರ ಅವರ ವರ್ಚಸ್ಸು, ಟಿಟಿಡಿಯ ಪಾವಿತ್ರ್ಯತೆಯನ್ನೇ ಹಾಳು ಮಾಡಿದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.