ನವದೆಹಲಿ: ತುರ್ಕ್ಮಾನ್ ಗೇಟ್ ಕಲ್ಲುತೂರಾಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 18ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೈನಿಕ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಸೀದಿಗೆ ಹೊಂದಿಕೊಂಡಿರುವ ಜಾಗ ಮತ್ತು ತುರ್ಕ್ಮಾನ್ ಗೇಟ್ ಹತ್ತಿರದ ಸ್ಮಶಾನದಲ್ಲಿನ ಒತ್ತುವರಿ ತೆರವು ಕಾರ್ಯವನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಇತ್ತೀಚೆಗೆ ಕೈಗೆತ್ತಿಕೊಂಡಿತ್ತು. ಜೆಸಿಬಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಕೆಲ ಕಿಡಿಗೇಡಿಗಳು ಎಂಸಿಡಿ ಸಿಬ್ಬಂದಿ, ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದರು. ಈ ಘಟನೆಯಲ್ಲಿ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.