ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಿಗೆ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿ. ಪಿ. ಮತಿಯಾಳಗನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿವಿಕೆ ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿಯಾಗಿರುವ ಮತಿಯಾಳಗನ್ ಅವರನ್ನು ಸೋಮವಾರ ರಾತ್ರಿ ಕರೂರು-ದಿಂಡಿಗಲ್ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮತಿಯಾಳಗನ್ ಸೇರಿ ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ಉಪ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮೂವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಪಕ್ಷದ ಮುಖ್ಯಸ್ಥ, ನಟ ವಿಜಯ್ ಅವರು ರ್ಯಾಲಿ ನಿಗದಿಯಾಗಿದ್ದ ವೇಲುಸಾಮಿಪುರಂನಲ್ಲಿ ಪ್ರಚಾರ ವಾಹನದಲ್ಲಿ ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಇದ್ದರು. ಇದರಿಂದಾಗಿ ಜನಜಂಗುಳಿ ಹೆಚ್ಚಾಯಿತು. ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ನಿಂತಿದ್ದ ಜನರು ನಿತ್ರಾಣಗೊಂಡರು’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.