ನವದೆಹಲಿ: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚಿಸಲು ಆಹ್ವಾನ ನೀಡುವಂತೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ನಿರ್ದೇಶನ ನೀಡುವಂತೆ ನಟ, ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಶುಕ್ರವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸುಪ್ರೀಂ ಕೋರ್ಟ್ನಲ್ಲಿ ಎಳಿಲರಸಿ ಕೆ. ಎಂಬವರು ಅರ್ಜಿ ಸಲ್ಲಿಸಿದ್ದು, ಸಂವಿಧಾನದ 12 ಹಾಗೂ 32ನೇ ವಿಧಿಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳಲ್ಲಿ ಗೆದ್ದಿದ್ದ ಟಿವಿಕೆ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ.

ಆದರೆ ಸರ್ಕಾರ ರಚಿಸಲು ಎರಡೆರಡು ಸಲ ರಾಜ್ಯಪಾಲರನ್ನು ಭೇಟಿಯಾದರೂ ಬಹುಮತಕ್ಕೆ ಬೇಕಾದ ಸಂಖ್ಯಾಬಲ ಇಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು.

ಚುನಾವಣೋತ್ತರ ಮೈತ್ರಿಯಲ್ಲಿ ಐದು ಶಾಸಕರನ್ನು ಹೊಂದಿದ ಕಾಂಗ್ರೆಸ್ ಪಕ್ಷವು ಟಿವಿಕೆಗೆ ಬೆಂಬಲ ಘೋಷಿಸಿತ್ತು.

ಶುಕ್ರವಾರ ನಡೆದ ಬಿರುಸಿನ ರಾಜಕೀಯ ಚಟುವಟಿಕೆಗಳಲ್ಲಿ ಎಡಪಕ್ಷಗಳಾದ ಸಿಪಿಐ ಹಾಗೂ ಸಿಪಿಐ(ಎಂ), ಟಿವಿಕೆಗೆ ಬೇಷರತ್ ಬೆಂಬಲ ನೀಡುವುದಾಗಿ ಘೋಷಿಸಿತ್ತು. ಸಿಪಿಐ ಹಾಗೂ ಸಿಪಿಐ(ಎಂ) ತಲಾ ಎರಡು ಸ್ಥಾನಗಳನ್ನು ಹೊಂದಿವೆ.

ಮತ್ತೊಂದೆಡೆ ಇಬ್ಬರು ಶಾಸಕರನ್ನು ಹೊಂದಿರುವ ವಿಸಿಕೆ ಪಕ್ಷವು ಇಂದು (ಶುಕ್ರವಾರ) ನಿರ್ಣಾಯಕ ಸಭೆ ಸೇರಲಿದ್ದು, ಟಿವಿಕೆಗೆ ಬೆಂಬಲ ಘೋಷಿಸುವ ಸಾಧ್ಯತೆ ಇದೆ. ಇದು ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆಯಲ್ಲಿರುವ ವಿಜಯ್ಗೆ ಬಹುಮತ ಸಾಬೀತುಪಡಿಸಲು ನೆರವಾಗಲಿದೆ.
.ಟಿವಿಕೆಗೆ ಎಡಪಕ್ಷಗಳ ಬೆಂಬಲ: ಶೀಘ್ರದಲ್ಲೇ ಹಕ್ಕು ಮಂಡಿಸಲಿರುವ ವಿಜಯ್.ಬಿಜೆಪಿ ಅಧಿಕಾರದಲ್ಲಿರುವಾಗ ಬಂಗಾಳದಲ್ಲಿ ನುಸುಳುವಿಕೆ ಅಸಾಧ್ಯ: ಅಮಿತ್ ಶಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.