ಚೆನ್ನೈ: ಪುದುಚೇರಿಯಲ್ಲಿ 12 ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕೆಮ್ಮು ಮತ್ತು ಶೀತದ ಲಕ್ಷಣಗಳನ್ನು ಹೊಂದಿರುವವರನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಪುದುಚೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ವಿ. ರವಿಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದೊಂದು ವಾರದಿಂದ 12 ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
.ವಿಜಯಪುರ | VRL ಬಸ್, ಲಾರಿಗೆ ಕಾರು ಡಿಕ್ಕಿ, ಆರು ಜನ ಸ್ಥಳದಲ್ಲೇ ಸಾವು.ರಾಜೀವ್ ಗಾಂಧಿ ಪುಣ್ಯತಿಥಿ: ಮೋದಿ, ಖರ್ಗೆ, ರಾಹುಲ್ ಗಾಂಧಿ ಸೇರಿ ಗಣ್ಯರ ನಮನ.
ಸಾರ್ವಜನಿಕರು ಆತಂಕಕ್ಕೆ ಒಳಗಾಗ ಬೇಕಿಲ್ಲ. ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಆರೋಗ್ಯ ಇಲಾಖೆ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ರವಿಚಂದ್ರನ್ ಹೇಳಿದ್ದಾರೆ.

ಸರ್ಕಾರಿ ಜನರಲ್ ಆಸ್ಪತ್ರೆ , ಕದಿರ್ಕಾಮಮ್ನಲ್ಲಿರುವ ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ -19 ರೋಗಿಗಳಿಗೆ ನಾಲ್ಕು ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದು ರವಿಚಂದ್ರನ್ ಹೇಳಿದ್ದಾರೆ.

ಗೋರಿಮೇಡುವಿನ ಸರ್ಕಾರಿ ಹೃದ್ರೋಗ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಆಧಾರಿತ ಆರು ಹಾಸಿಗೆಗಳ ವಾರ್ಡ್ ಅನ್ನು ಕಾಯ್ದಿರಿಸಲಾಗಿದೆ. ಆರೋಗ್ಯ ಇಲಾಖೆಯು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ಮತ್ತು ದೆಹಲಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ರವಿಚಂದ್ರನ್ ತಿಳಿಸಿದ್ದಾರೆ.
.ಭಕ್ತರ ಭಾವನೆಗೆ ಧಕ್ಕೆ: ತಮಿಳು ಚಿತ್ರತಂಡದ ವಿರುದ್ಧ ಕಾನೂನು ಕ್ರಮ; ಟಿಟಿಡಿ .ತಿರುಪತಿ ದೇವಾಲಯದ ಭದ್ರತೆಗೆ ಡ್ರೋನ್ ವಿರೋಧಿ ತಂತ್ರಜ್ಞಾನ ಅಳವಡಿಕೆ: ಟಿಟಿಡಿ.Public WiFi Security Risks: ವೈಫೈ ಉಚಿತ, ಅಪಾಯ ಖಚಿತ.ಎಸ್ಸಿ ಪಟ್ಟಿಯಲ್ಲಿ ಲಿಂಗಾಯತ ಬೇಡ ಜಂಗಮ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.