ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ 20 ಮಕ್ಕಳಲ್ಲಿ ಕೊರೊನಾಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಎಸ್. ಮೋಹನ್ ಕುಮಾರ್, ಮಕ್ಕಳಲ್ಲಿ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಗೊಂಡಿದೆ ಎಂದು ಹೇಳಿದ್ದಾರೆ.
20 ಮಕ್ಕಳನ್ನು ಕದಿರ್ಕಮಂನಲ್ಲಿರುವ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.