ಜಬಲಪುರ: ಟ್ವಿಶಾ ಶರ್ಮಾ ಸಾವು ಪ್ರಕರಣ ಸಂಬಂಧ, ತಲೆಮರೆಸಿಕೊಂಡಿರುವ ಆಕೆಯ ಪತಿ ಸಮರ್ಥ್ ಸಿಂಗ್ ಅವರು ಜಬಲಪುರ ಹೈಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಈ ಹಿಂದೆ ಸಮರ್ಥ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತಿರಸ್ಕರಿಸಿತ್ತು. ಅವರ ತಾಯಿ, ನಿವೃತ್ತ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರಿಗೆ ಜಾಮೀನು ನೀಡಿತ್ತು.

ಭೋಪಾಲ್ನ ಕತಾರ ಹಿಲ್ಸ್ ಪ್ರದೇಶದಲ್ಲಿರುವ ಮನೆಯಲ್ಲಿ ಟ್ವಿಶಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೇ 12ರಂದು ಪತ್ತೆಯಾಗಿತ್ತು.

‘ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಕೊಲೆ ಮಾಡಲಾಗಿದೆ’ ಎಂದು ಟ್ವಿಶಾ ಅವರ ಪಾಲಕರು ಆರೋಪಿಸಿದ್ದರು. ‘ಸೊಸೆಯು ಮಾದಕ ವಸ್ತುವಿನ ವ್ಯಸನಿಯಾಗಿದ್ದಳು’ ಎಂದು ಸಿಂಗ್ ದಂಪತಿ ಹೇಳಿದ್ದರು.

ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 80(2), 85, ಮತ್ತು 3(5)ರಡಿ ವರದಕ್ಷಿಣೆ ನಿಷೇಧ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳಡಿ ಸಮರ್ಥ್ ಸಿಂಗ್ ಮತ್ತು ಗಿರಿಬಾಲಾ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಮರ್ಥ್ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಸಾವಿರ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆಹೋಗಿದ್ದಾರೆ.
. ಭೋಪಾಲ್ | ಟ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ವರದಿ ಕೇಳಿದ ಮಹಿಳಾ ಆಯೋಗ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.