ಭೋಪಾಲ್/ಜಬಲಪುರ: ನಟಿ ಟ್ವಿಶಾ ಶರ್ಮಾ ಸಾವಿನ ಪ್ರಕರಣ ಸಂಬಂಧ, ಪತಿ ಸಮರ್ಥ್ ಸಿಂಗ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸಮರ್ಥ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಬಳಿಕ, ಶರಣಾಗತಿಯಾಗುವ ಉದ್ದೇಶದಿಂದ ಜಬಲಪುರ ಜಿಲ್ಲಾ ನ್ಯಾಯಾಲಯಕ್ಕೆ ಸಂಜೆ ಬಂದಾಗ ಓಮತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಹೈಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದ್ದರು.

ಸಿಬಿಐಗೆ ವಹಿಸಲು ಪ್ರಸ್ತಾವ: ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಮಧ್ಯಪ್ರದೇಶ ಸರ್ಕಾರ ಪ್ರಸ್ತಾವ ಸಲ್ಲಿಸಿದೆ.

ಗೃಹ ಇಲಾಖೆಯ ಕಾರ್ಯದರ್ಶಿ ಕೃಷ್ಣವೇಣಿ ದೇಸಾವಟು ಅವರು ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ.

ಭೋಪಾಲ್ನ ಕತಾರ ಹಿಲ್ಸ್ ಪ್ರದೇಶದಲ್ಲಿರುವ ಮನೆಯಲ್ಲಿ ಟ್ವಿಶಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮೇ 12ರಂದು ಪತ್ತೆಯಾಗಿತ್ತು.

ಟ್ವಿಶಾ ಅವರ ಪತಿ ಸಮರ್ಥ್ ಸಿಂಗ್ ಮತ್ತು ಅತ್ತೆ, ನಿವೃತ್ತ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 80(2), 85, ಮತ್ತು 3(5) ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳಡಿ ಕತಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

‘ವರದಕ್ಷಿಣೆ ಕಿರುಕುಳ ನೀಡಿ ಆಕೆಯನ್ನು ಕೊಲೆ ಮಾಡಲಾಗಿದೆ’ ಎಂದು ಟ್ವಿಶಾ ಅವರ ಪೋಷಕರು ಆರೋಪಿಸಿದ್ದರು. ‘ಸೊಸೆಯು ಮಾದಕ ವಸ್ತುವಿನ ವ್ಯಸನಿಯಾಗಿದ್ದಳು’ ಎಂದು ಸಿಂಗ್ ದಂಪತಿ ದೂರಿದ್ದರು.

2ನೇ ಬಾರಿ ಮರಣೋತ್ತರ ಪರೀಕ್ಷೆಗೆ ಅನುಮತಿ

ಟ್ವಿಶಾ ಶರ್ಮಾ ಅವರ ಶವವನ್ನು ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸಲು ಮಧ್ಯಪ್ರದೇಶ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ‘ಟ್ವಿಶಾ ಅವರ ತಂದೆ ನವನಿಧಿ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ದೆಹಲಿಯ ಏಮ್ಸ್ ವೈದ್ಯರ ತಂಡವನ್ನು ಭೋಪಾಲ್ಗೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ’ ಎಂದು ನವನಿಧಿ ಅವರ ವಕೀಲ ಅಂಕುರ್ ಪಾಂಡೆ ತಿಳಿಸಿದ್ದಾರೆ. ಎರಡನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ತಿರಸ್ಕರಿಸಿದ ಎರಡು ದಿನಗಳ ನಂತರ ಕುಟುಂಬವು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.