ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಶುಕ್ರವಾರ ತಡರಾತ್ರಿ ಹ್ಯಾಕ್ ಮಾಡಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹ್ಯಾಕರ್‌ಗಳು ಮುಖ್ಯಮಂತ್ರಿ ಕಚೇರಿಯ ಖಾತೆಯಿಂದ 400-500 ಟ್ವೀಟ್‌ಗಳನ್ನು ಮಾಡಿದ್ದರು ಎಂದು ಅವರು ಹೇಳಿದ್ದಾರೆ.

‘ರಾತ್ರಿ ಸುಮಾರು 29 ನಿಮಿಷಗಳ ಕಾಲ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ಸುಮಾರು 400-500 ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ್ದರು ಮತ್ತು ಅಸ್ವಾಭಾವಿಕ ಚಟುವಟಿಕೆಯ ಆಧಾರದ ಮೇಲೆ ಖಾತೆಯನ್ನು ಅಮಾನತುಗೊಳಿಸಲಾಗಿತ್ತು’ಎಂದು ಅಧಿಕಾರಿ ಶನಿವಾರ ಪಿಟಿಐಗೆ ತಿಳಿಸಿದರು.

ಇದೀಗ, ಉತ್ತರ ಪ್ರದೇಶದ ಮುಖ್ಯಮಂತ್ರಿ ಟ್ವಿಟರ್ ಖಾತೆಯನ್ನು ಶನಿವಾರ ಬೆಳಿಗ್ಗೆ ಮರುಸ್ಥಾಪಿಸಲಾಗಿದೆ.

@CMOffice ಎಂಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿಯ ಟ್ವಿಟರ್ ಹ್ಯಾಂಡಲ್ 40 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ.

ಹ್ಯಾಕ್ ಮಾಡಿದ ಬಳಿಕ ಟ್ವಿಟರ್ ಹ್ಯಾಂಡಲ್‌ನ ಪ್ರೊಫೈಲ್ ಚಿತ್ರವನ್ನು ತೆಗೆದು ಕಾರ್ಟೂನ್ ಚಿತ್ರ ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.