ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರಕ್ಕೆ ಬಾಂಬ್‌ ಬೆದರಿಕೆ: ಇಬ್ಬರ ಬಂಧನ

Published 4 ಜನವರಿ 2024, 0:36 IST
Last Updated 4 ಜನವರಿ 2024, 0:36 IST
ಅಕ್ಷರ ಗಾತ್ರ

ಲಖನೌ: ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸುವುದಾಗಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗುರಿಯಾಗಿಸಿ ಬಾಂಬ್‌ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ತಾಹರ್‌ ಸಿಂಗ್‌ ಹಾಗೂ ಓಂಪ್ರಕಾಶ್ ಮಿಶ್ರಾ ಬಂಧಿತರು. ಉತ್ತರಪ್ರದೇಶದ ಎಸ್‌ಟಿಎಫ್‌, ಗೋಮತಿನಗರದ ವಿಭೂತಿಖಂಡ ಪ್ರದೇಶದಲ್ಲಿ ಈ ಇಬ್ಬರನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಗೊಂಡ ನಗರದ ನಿವಾಸಿಗಳಾಗಿದ್ದು, ಪ್ಯಾರಾಮೆಡಿಕಲ್ ಇನ್ಸ್‌ಟಿಟ್ಯೂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖೆ ನಡೆಯುತ್ತಿದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT