ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ‘ಜನರನ್ನು ಉಳಿಸಿ ಮತ್ತು ದೇಶ ಉಳಿಸಿ’ ಎಂಬ ಘೋಷಣೆಯೊಂದಿಗೆ ಫೆಬ್ರವರಿ 23 ಮತ್ತು 24 ರಂದು ಎರಡು ದಿನಗಳ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು 10 ಕೇಂದ್ರ ಕಾರ್ಮಿಕ ಸಂಘಟನೆಗಳು ಸೋಮವಾರ ಘೋಷಿಸಿವೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕರ ಸಹಯೋಗದಲ್ಲಿಯೇ ಪೂರ್ವಸಿದ್ಧತಾ ಸಭೆಗಳನ್ನು ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧರಿಸಿವೆ.

ಭಾನುವಾರ ಇಲ್ಲಿ ನಡೆದ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ್ರ ವಲಯದ ಅಖಿಲ ಭಾರತ ಒಕ್ಕೂಟಗಳು ಹಾಗೂ ಸಂಘಗಳ ಜಂಟಿ ವೇದಿಕೆಯ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಎಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.