ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಶ್ಶೂರ್: ರೈಲು ನಿಲ್ದಾಣದ ಮೇಲ್ಸೇತುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Published : 8 ಸೆಪ್ಟೆಂಬರ್ 2024, 9:41 IST
Last Updated : 8 ಸೆಪ್ಟೆಂಬರ್ 2024, 9:41 IST
ಫಾಲೋ ಮಾಡಿ
Comments

ತ್ರಿಶ್ಶೂರ್: ಕೇರಳದ ತ್ರಿಶ್ಶೂರ್ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಎರಡು ದಿನದ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವನ್ನು ಚೀಲದಲ್ಲಿರಿಸಿ ಯಾರೋ ಅಲ್ಲಿ ಇಟ್ಟು ಹೋಗಿದ್ದಾರೆ.

ಚೀಲವನ್ನು ಮೊದಲು ಕಸ ಗುಡಿಸುವವರು ಗಮನಿಸಿದ್ದು, ಬಳಿಕ, ರೈಲ್ವೆ ಪೊಲೀಸ್ ಪಡೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅದರೊಳಗೆ ಎರಡು ದಿನದ ನವಜಾತ ಶಿಶುವಿನ ಮೃತದೇಹ ಕಂಡು ಬಂದಿದೆ.

‘ಚೀಲದೊಳಗೆ ಎರಡು ದಿನ ಗಂಡು ಮಗುವಿನ ಶವ ಪತ್ತೆಯಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ’ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ರೈಲ್ವೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಲ್ಲಿ ಚೀಲ ಇಟ್ಟವರ ಪತ್ತೆಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಗುವಿನ ಮೃತದೇಹವನ್ನು ತ್ರಿಶ್ಶೂರ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT