ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜರಾಂಗೆ ಗ್ರಾಮದಲ್ಲಿ ಕಲ್ಲು ತೂರಾಟ: ಇಬ್ಬರ ಬಂಧನ

Published 28 ಜೂನ್ 2024, 13:30 IST
Last Updated 28 ಜೂನ್ 2024, 13:30 IST
ಅಕ್ಷರ ಗಾತ್ರ

ಛತ್ರಪತಿ ಸಂಭಾಜಿನಗರ: ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಅವರ ಗ್ರಾಮದಲ್ಲಿ ಕಲ್ಲು ತೂರಾಟ ಮತ್ತು ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೆ, 15–20 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. 

ಮಟೊರಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ವರದಿಯಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿಯೊಂದನ್ನು ನಿಯೋಜಿಸಲಾಗಿದೆ. 

ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಗೆ ಒತ್ತಾಯಿಸಿ ಮೀಸಲಾತಿ ಹೋರಾಟಗಾರರಾದ ಲಕ್ಷ್ಮಣ್ ಹಾಕೆ ಮತ್ತು ನವನಾಥ ವಾಘ್ಮಾರೆ ಅವರ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಮಟೊರಿ ಗ್ರಾಮದ ಮುಖಾಂತರ ತೆರಳುತ್ತಿದ್ದರು. ಈ ವೇಳೆ ಕೆಲವರು ಘೋಷಣೆಗಳನ್ನು ಕೂಗಿದ್ದು, ಬಳಿಕ ಗ್ರಾಮದ ಬಸ್ ನಿಲ್ದಾಣದ ಬಳಿ ಕಲ್ಲು ತೂರಾಟ ನಡೆದಿದೆ. ಆದರೆ, ಮೊದಲಿಗೆ ಯಾರು ಘೋಷಣೆಗಳನ್ನು ಕೂಗಿದರು ಮತ್ತು ಕಲ್ಲು ತೂರಾಟ ನಡೆಸಿದರು ಎಂಬುದು ಖಚಿತವಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT