ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀನಗರ: ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್ ಉಗ್ರರ ಹತ್ಯೆ

Published : 30 ಸೆಪ್ಟೆಂಬರ್ 2022, 10:32 IST
ಫಾಲೋ ಮಾಡಿ
Comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌ ಎ ಮೊಹಮದ್‌ (ಜೆಇಎಂ) ನ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗಿನ ಜಾವ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎರಡು ಎನ್‌ಕೌಂಟರ್ ನಡೆದಿದೆ.ಶೋಪಿಯಾನ್‌ನ ಚಿತ್ರಗಾಮ್ ಪ್ರದೇಶ ಮತ್ತು ಬಾರಾಮುಲ್ಲಾದ ಪಟ್ಟನ್‌ನ ಯಡಿಪೋರಾ ಪ್ರದೇಶದಲ್ಲಿ ಭದ್ರತಾ ಪ‍ಡೆಗಳು ಶೋಧ ಕಾರ್ಯ ನಡೆಸುವಾಗ ಎನ್‌ಕೌಂಟರ್‌ ಶುರುವಾಗಿದೆ ಎಂದು ಅವರು ಹೇಳಿದರು.

ಬಾರಾಮುಲ್ಲಾ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT