ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾವೊವಾದಿಗಳ ದಾಳಿ: ಇಬ್ಬರು ಯೋಧರು ಹುತಾತ್ಮ 

Published 15 ಆಗಸ್ಟ್ 2023, 14:32 IST
Last Updated 15 ಆಗಸ್ಟ್ 2023, 14:32 IST
ಅಕ್ಷರ ಗಾತ್ರ

ಚೈಬಾಸಾ (ಜಾರ್ಖಂಡ್‌) (ಪಿಟಿಐ): ಪಶ್ಚಿಮ ಸಿಂಗ್‌ಭೂಮ್‌ ಜಿಲ್ಲೆಯಲ್ಲಿ ಮಾವೊವಾದಿಗಳೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್‌ ಇಲಾಖೆಯ ‘ಜಾರ್ಖಂಡ್‌ ಜಾಗ್ವಾರ್‌ ಫೋರ್ಸ್‌’ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

‘ಟೊಂಟಾ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಮಿತ್‌ ತಿವಾರಿ, ಗೌತಮ್‌ ಕುಮಾರ್‌ ಮೃತ ಯೋಧರು’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಆಶುತೋಷ್‌ ಶೇಖರ್‌ ತಿಳಿಸಿದ್ದಾರೆ.  

ಕೆಲ ದಿನಗಳ ಹಿಂದೆ ಇದೇ ಸ್ಥಳದಲ್ಲಿ ಮಾವೋವಾದಿಗಳ ಗುಂಡಿಗೆ ಸಿಆರ್‌ಪಿಎಫ್‌ ಯೋಧರೊಬ್ಬರು ಹತ್ಯೆಯಾಗಿದ್ದರು. ಮತ್ತೊಬ್ಬರು ಗಾಯಗೊಂಡಿದ್ದರು. ಈ ಜಾಗದಲ್ಲಿ ಕೂಂಬಿಂಗ್‌ ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT