ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಪಾತಕ್ಕೆ ಅನುಮತಿ: ಸುಪ್ರೀಂ ಕೋರ್ಟ್‌ನಿಂದ ಭಿನ್ನ ಅಭಿಪ್ರಾಯದ ಆದೇಶ

Published 11 ಅಕ್ಟೋಬರ್ 2023, 16:16 IST
Last Updated 11 ಅಕ್ಟೋಬರ್ 2023, 16:16 IST
ಅಕ್ಷರ ಗಾತ್ರ

ನವದೆಹಲಿ: 26 ವಾರಗಳ ಗರ್ಭಿಣಿಗೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಿ ಅಕ್ಟೋಬರ್‌ 9ರಂದು ನೀಡಿದ್ದ ಆದೇಶವನ್ನು ಹಿಂಪಡೆಯಬೇಕು ಎಂದು ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠವು ಬುಧವಾರ ಭಿನ್ನ ಅಭಿಪ್ರಾಯದ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೂಕ್ತ ನ್ಯಾಯಪೀಠಕ್ಕೆ ವಹಿಸುವ ಸಲುವಾಗಿ ಅದನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರ ಮುಂದೆ ಇರಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಹಿಮಾ ಕೋಹ್ಲಿ ಮತ್ತು ಬಿ.ವಿ. ನಾಗರತ್ನ ಅವರಿದ್ದ ನ್ಯಾಯಪೀಠ ಹೇಳಿದೆ.

ಅರ್ಜಿ ವಿಚಾರಣೆ ವೇಳೆ, ‘27 ವರ್ಷ ವಯಸ್ಸಿನ ವಿವಾಹಿತ ಮಹಿಳೆಗೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಲು ನನಗೆ ಮನಸ್ಸಿರಲಿಲ್ಲ’ ಎಂದು ಹಿಮಾ ಕೋಹ್ಲಿ ಅವರು ಹೇಳಿದರು. ಆದರೆ, ಅ.9ರಂದು ನೀಡಿದ್ದ ತೀರ್ಪನ್ನು ಹಿಂಪಡೆಯಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಬಿ.ವಿ. ನಾಗರತ್ನ ಅವರು ವಜಾಗೊಳಿಸಿದರು. ಜೊತೆಗೆ, ಹಿಂದಿನ ತೀರ್ಪು ಸಮರ್ಪಕವಾಗಿದೆ ಎಂದರು. 

ಇದೇ ನ್ಯಾಯಪೀಠವು ಅ.9ರಂದು ಈ ಪ್ರಕರಣದಲ್ಲಿ ತೀರ್ಪು ನೀಡಿತ್ತು. ಮಹಿಳೆಯು ಖಿನ್ನತೆಯಿಂದ ಬಳಲುತ್ತಿದ್ದಾರೆ. ಅವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಮೂರನೇ ಮಗುವನ್ನು ಬೆಳೆಸಲು ಮಾನಸಿಕವಾಗಿ ಮತ್ತು ಆರ್ಥಿಕವಾಗಿ ಶಕ್ತರಾಗಿಲ್ಲ ಎಂಬ ಅಂಶಗಳನ್ನು ಗಮನಿಸಿದ್ದ ನ್ಯಾಯಪೀಠ ಗರ್ಭಪಾತಕ್ಕೆ ಅನುಮತಿ ನೀಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT