ಈರೋಡ್: ತಮಿಳುನಾಡಿನ ಈರೋಡ್ ಜಿಲ್ಲೆಯ ಅಕ್ರಮ ಕಲ್ಲು ಗಣಿಕಾರಿಕೆಯೊಂದರಲ್ಲಿ ಮಂಗಳವಾರ ತಡರಾತ್ರಿ ಸ್ಫೋಟ ಸಂಭವಿಸಿ ಕರ್ನಾಟಕ ಮೂಲದ ಒಬ್ಬ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಕರ್ನಾಟಕ ಮೂಲದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು ಅವರ ಕುಟುಂಬದವರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ.