ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ | ಗುಂಡಿನ ಚಕಮಕಿ: ಇಬ್ಬರು ಮಾವೋವಾದಿಗಳ ಹತ್ಯೆ

Published 25 ಏಪ್ರಿಲ್ 2024, 5:53 IST
Last Updated 25 ಏಪ್ರಿಲ್ 2024, 5:53 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಬೌದ್ ಜಿಲ್ಲೆಯಲ್ಲಿ ಮಾವೋಮಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂತಮಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪರ್ಹೆಲ್ ಮೀಸಲು ಅರಣ್ಯದಲ್ಲಿ ಮಾವೋಮಾದಿಗಳು ಮತ್ತು ಒಡಿಶಾ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ನಡುವೆ ಗುಂಡಿನ ಚಕಮಕಿ ನಡೆದಿದೆ. ಇಂದು (ಗುರುವಾರ) ಮುಂಜಾನೆಯವರೆಗೂ ಕಾರ್ಯಾಚರಣೆ ಮುಂದುವರಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಡೆದ ಸ್ಥಳದಿಂದ ಇಬ್ಬರು ಮಾವೋವಾದಿಗಳ ಶವ, ಶಸ್ತ್ರಾಸ್ತ್ರ, ಗ್ರೆನೇಡ್ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT