ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ | ಕೆಫೆ ಮಾಲೀಕರೊಂದಿಗೆ ವಾಗ್ವಾದ; ಗುಂಡು ಹಾರಿಸಿದ ಐವರು ಆರೋಪಿಗಳ ಬಂಧನ

Published : 26 ಆಗಸ್ಟ್ 2024, 4:16 IST
Last Updated : 26 ಆಗಸ್ಟ್ 2024, 4:16 IST
ಫಾಲೋ ಮಾಡಿ
Comments

ನವದೆಹಲಿ: ನೈರುತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದ ಕೆಫೆಯೊಂದರಲ್ಲಿ ಕುಳಿತುಕೊಳ್ಳುವ ಆಸನಗಳ ವಿಚಾರವಾಗಿ ಮಾಲೀಕರೊಂದಿಗೆ ವಾಗ್ವಾದ ನಡೆಸಿ, ಗುಂಡಿನ ದಾಳಿ ನಡೆಸಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಅಹಮದ್ (26), ಔರಂಗಜೇಬ್ (26), ಅತುಲ್ (20), ಜಾವೇದ್ (23) ಮತ್ತು ಆದಿಲ್ (19) ಎಂದು ಗುರುತಿಸಲಾಗಿದೆ. ದಕ್ಷಿಣ ಕ್ಯಾಂಪಸ್ ಪೊಲೀಸ್ ಠಾಣೆಗೆ ರಾತ್ರಿ 9 ಗಂಟೆ ಸುಮಾರಿಗೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಕರೆ ಬಂದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಆರೋಪಿಗಳನ್ನು ಬೆನ್ನಟ್ಟಿ ಹಿಡಿದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ನೈರುತ್ಯ) ರೋಹಿತ್ ಮೀನಾ ತಿಳಿಸಿದ್ದಾರೆ.

ರಾತ್ರಿ 8.30 ರ ಸುಮಾರಿಗೆ ಕೆಫೆಗೆ ಬಂದಿದ್ದ ಆರೋಪಿಗಳು ಕುಳಿತುಕೊಳ್ಳುವ ಕುರ್ಚಿ ವಿಚಾರಕ್ಕೆ ಸಿಬ್ಬಂದಿ ಮತ್ತು ಮಾಲೀಕ ರೋಹಿತ್ ಅವರೊಂದಿಗೆ ತೀವ್ರ ವಾಗ್ವಾದ ನಡೆಸಿದ್ದರು. ಬಳಿಕ ಕೆಫೆಯ ಹೊರಗೆ ಆರೋಪಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಟ್ಟುಹಬ್ಬ ಆಚರಿಸುವ ಸಲುವಾಗಿ ಆರೋಪಿಗಳು ಕೆಫೆಗೆ ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT