ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢದಲ್ಲಿ ಇಬ್ಬರು ನಕ್ಸಲರ ಹತ್ಯೆ

Published 29 ಮೇ 2024, 7:37 IST
Last Updated 29 ಮೇ 2024, 7:37 IST
ಅಕ್ಷರ ಗಾತ್ರ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಬಿಜಾಪುರ ಜಿಲ್ಲಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಕಲ್ಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಘಟನೆಯೊಂದಿಗೆ, ಇದೇ ವರ್ಷ ಛತ್ತೀಸಗಢ ರಾಜ್ಯದಲ್ಲಿ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 118 ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT