ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳ ಜೊತೆಗಿನ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಆದರೆ ನಕ್ಸಲರೇ ಹತರಾದವರ ಮೃತದೇಹಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಚಿಂತವಾಗು ನದಿ ಬಳಿಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಎನ್‌ಕೌಂಟರ್ ನಡೆಸಿದರು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.